ಜಿಲ್ಲಾಡಳಿತದ ವತಿಯಿಂದ ಏ.೫ ರಂದು ಡಾ. ಬಾಬು ಜಗಜೀವನರಾಂ ಅವರ ೧೦೯ ನೇ ಜಯಂತಿ ಹಾಗೂ ಏ.೧೪ ರಂದು ಡಾ. ಬಿ.ಆರ್. ಅಂಬೇಡ್ಕರ ಅವರ ೧೨೫ ನೇ ಜಯಂತಿಯನ್ನು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮಗಳಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದ್ದಾರೆ.
ಡಾ. ಬಾಬು ಜಗಜೀವನರಾಂ ಮತ್ತು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ದಿನಗಳಂದು ಬೆಳಿಗ್ಗೆ ೭.೩೦ ಗಂಟೆಗೆ ನಗರದ ತಹಶೀಲ್ದಾರ ಕಛೇರಿಯಿಂದ ಮಹನೀಯರ ಭಾವಚಿತ್ರದ ಮೆರವಣಿಗೆ ಆರಂಭಗೊಳ್ಳಲಿದ್ದು, ಡಾ.ಅಂಬೇಡ್ಕರ ವೃತ್ತ, ಡಾ.ಬಾಬು ಜಗಜೀವನರಾಂ ವೃತ್ತ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ. ನಂತರ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದೆ. ಕಾರ್ಯಕ್ರಮಗಳ ದಿನದಂದು ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿ ಸಮೇತ ಭಾವಚಿತ್ರದ ಮೆರವಣಿಗೆ ಹಾಗೂ ಸಾಹಿತ್ಯಭವನದಲ್ಲಿ ನಡೆಯುವ ಸಮಾರಂಭಗಳಲ್ಲಿ ಉಪಸ್ಥಿತರಿರಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.