ಕೊಪ್ಪಳ : ಹಿರೇಹಳ್ಳದ ಹಿನ್ನಿರಿನಿಂದ ಯಾವಗಲೂ ತೊಂದರೆ ಅನುಭವಿಸುತ್ತಿರುವ ಶಿರೂರು, ಮುತ್ತಾಳ, ವೀರಾಪೂರ ಗ್ರಾಮಗಳನ್ನು ಸ್ಥಳಾಂತರಿಸಬೇಕೆಂದು ಕರವೇ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ದರು.
ಕಿನ್ನಾಳದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು. ಹಿರೇಹಳ್ಳ ನೀರಾವರಿ ಕಚೇರಿಗೆ ಮುತ್ತಿಗೆ ಹಾಕಿ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು. ತೀವ್ರ ತೊಂದರೆ ಅನುಭವಿಸುತ್ತಿರುವ ಗ್ರಾಮಗಳ ಸ್ಥಳಾಂತರದ ಬಗ್ಗೆ ಎಷ್ಟು ಸಾರಿ ಒತ್ತಾಯಸಿದರೂ ಯಾರು ಅದರ ಬಗ್ಗೆ ಹೆಚ್ಚಿನ ಗಮನ ಕೊಡುತ್ತಿಲ್ಲ. ಮಳೆಗಾಲ ಆರಂಭವಾಗಿರುವುದರಿಂದ ಮತ್ತ ಗ್ರಾಮಸ್ಥರು ತೊಂದರೆ ಅನುಭವಿಸುತ್ತಾರೆ. ಶೀಘ್ರದಲ್ಲಿ ಸ್ಥಳಾಂತರಕ್ಕೆ ಕ್ರಮಕೈಗೊಳ್ಳದಿದ್ದರೆ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
0 comments:
Post a Comment
Click to see the code!
To insert emoticon you must added at least one space before the code.