ಗಂಗಾವತಿ : ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ಅಭಿವೃದ್ದಿಗೆ ಮುಂದಾಗಬೇಕು ತಮಗೆ ದೊರೆತಿರುವ ಸೇವೆಯ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನುಡಿದರು.
ತಮ್ಮ ನಿವಾಸದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಿಜೆಪಿ ಸರಕಾರ ಕಾಲಹರಣ ಮಾಡುತ್ತಿದೆ. ರಾಜ್ಯವನ್ನು ಕತ್ತಲೆಯತ್ತ ಒಯ್ದಿದೆ ರಾಜ್ಯದಲ್ಲಿ ಅಭಿವದ್ದಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ ಸೇರುವ ಬಗ್ಗೆ ನಾಯಕರು ತೀರ್ಮಾನಿಸುತ್ತಾರೆ ಎಂದರು. ಸಮಾರಂಭದಲ್ಲಿ ಹಾಜರಿದ್ದ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಮಾತನಾಡಿ ಅನ್ಸಾರಿ ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಎಂದದು. ಮಾಜಿ ಶಾಸಕ ಬಸವರಾಜ ಹಿಟ್ನಾಳ, ಜಿ.ಪಂ. ಅಧ್ಯಕ್ಷ ರಾಘವೇಂದ್ರ ಹಿಟ್ನಾಳ ಮಾತನಾಡಿದರು.
0 comments:
Post a Comment
Click to see the code!
To insert emoticon you must added at least one space before the code.