ಕೊಪ್ಪಳ ಫೆ. : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೦ ನೇ ಸಾಲಿನಲ್ಲಿ ಕನ್ನಡದಲ್ಲಿ ಪ್ರಕಟವಾದ ಉತ್ತಮ ಕೃತಿಗಳಿಗೆ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ೨೦೧೦ ನೇ ಸಾಲಿನಲ್ಲಿ ಅಂದರೆ ಜನವರಿ ೨೦೧೦ ರಿಂದ ಡಿಸೆಂಬರ್ ೨೦೧೦ ರ ಅವಧಿಯಲ್ಲಿ ಪ್ರಥಮಾವೃತ್ತಿಯಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಅವುಗಳ ಮುದ್ರಣ, ಮುಖಪುಟ, ವಿನ್ಯಾಸ, ಗುಣಮಟ್ಟ ಪರಿಗಣಿಸಿ, ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಉದ್ದೇಶಿಸಿದೆ. ಆಸಕ್ತರು ತಮ್ಮ ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು ಹಾಗೂ ಪೂರ್ಣ ವಿಳಾಸದ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೦೨ ವಿಳಾಸಕ್ಕೆ ಫೆ. ೧೦ ರ ಒಳಗಾಗಿ ಕಳುಹಿಸಬೇಕು. ಹೆಚ್ಚಿನ ವಿವರಗಳನ್ನು ದೂರವಾಣಿ ಸಂಖ್ಯೆ: ೦೮೦- ೨೨೪೮೪೫೧೬ ಕ್ಕೆ ಕರೆ ಮಾಡಿ ಪಡೆಯಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
0 comments:
Post a Comment
Click to see the code!
To insert emoticon you must added at least one space before the code.