PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. : ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ ಮಾ. ೧೭ ರಿಂದ ೩೦ ರವರೆಗೆ ಜಿಲ್ಲೆಯ ೧೧ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.
ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಮಾ. ೧೭ ರಂದು ಬೆಳಿಗ್ಗೆ ೦೬ ಗಂಟೆಯಿಂದ ಮಾ. ೩೦ ರಂದು ಸಾಯಂಕಾಲ ೦೬ ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಲಂ ೧೪೪ರ ಅನ್ವಯ ನಿಷೇಧಾಜ್ಞೆಯನ್ನು ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಪರೀಕ್ಷಾ ಸಮಯದಲ್ಲಿ ಜೆರಾಕ್ಸ್ ಹಾಗೂ ಕಂಪ್ಯೂಟರ್ ಕೇಂದ್ರಗಳನ್ನು ನಿಷೇಧಿಸಿದೆ. ಸಾರ್ವಜನಿಕರುಲ ಯಾವುದೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು, ಸಾರ್ವಜನಿಕರ ಸಭೆ, ವಿಜಯೋತ್ಸವ, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ಮದುವೆ, ಶವ ಸಂಸ್ಕಾರ, ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಪಿ.ಯು.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ ೯೩೫೬ ವಿದ್ಯಾರ್ಥಿಗಳು
ಕೊಪ್ಪಳ ಮಾ. : ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ ಮಾ. ೧೭ ರಿಂದ ೩೦ ರವರೆಗೆ ಜಿಲ್ಲೆಯ ೧೧ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು ೯೩೫೬ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ.
ಪಿ.ಯು.ಸಿ. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಜಿಲ್ಲೆಯಲ್ಲಿ ಒಟ್ಟು ೧೧ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು ೯೩೫೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪ.ಪೂ. ಕಾಲೇಜಿನಲ್ಲಿ- ೧೩೩೧ ವಿದ್ಯಾರ್ಥಿಗಳು, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು- ೯೬೩, ಸರ್ಕಾರಿ ಪ.ಪೂ. ಬಾಲಕಿಯರ ಕಾಲೇಜು- ೯೮೨, ಯಲಬುರ್ಗಾದ ಸರ್ಕಾರಿ ಪ.ಪೂ. ಕಾಲೇಜು- ೮೧೬, ಕುಕನೂರಿನ ವಿದ್ಯಾನಂದ ಗುರುಕುಲ ಪ.ಪೂ. ಕಾಲೇಜು- ೫೭೧, ಕುಷ್ಟಗಿಯ ಸರ್ಕಾರಿ ಪ.ಪೂ. ಬಾಲಕರ ಕಾಲೇಜು- ೧೦೬೨, ತಾವರಗೇರಾದ ಸರ್ಕಾರಿ ಪ.ಪೂ. ಬಾಲಕಿಯರ ಕಾಲೇಜು- ೩೮೧, ಗಂಗಾವತಿಯ ಸರ್ಕಾರಿ ಪ.ಪೂ. ಬಾಲಕರ ಕಾಲೇಜು- ೧೦೮೭, ಹೆಚ್.ಆರ್. ಸರೋಜಮ್ಮ ಪ.ಪೂ. ಬಾಲಕಿಯರ ಕಾಲೇಜು- ೫೨೨, ಸರ್ಕಾರಿ ಎಸ್.ಎಮ್.ಎನ್.ಎಮ್. ಪ.ಪೂ. ಬಾಲಕಿಯರ ಕಾಲೇಜು- ೮೦೪ ಹಾಗೂ ಕಾರಟಗಿಯ ಸರ್ಕಾರಿ ಪ.ಪೂ. ಬಾಲಕರ ಕಾಲೇಜಿನಲ್ಲಿ ೮೩೭ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
16 Mar 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top