ಕೊಪ್ಪಳ ಮೇ. : ಭಾರತ ಸರ್ಕಾರದಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕರ ಸೇವೆಯನ್ನು ಗುರುತಿಸಿ ಮಕ್ಕಳ ಸೇವೆಗಾಗಿ ರಾಜೀವ್‌ಗಾಂಧಿ ಮಾನವ ಸೇವಾ ರಾಷ್ಟ್ರಪ್ರಶಸ್ತಿ ಯನ್ನು ೧೦ ವರ್ಷಕ್ಕಿಂತ ಹೆಚ್ಚಿನ ಉತ್ತಮ ಸೇವೆಯನ್ನು ಸಲ್ಲಿಸಿರುವಂತಹ ೦೩ ವ್ಯಕ್ತಿಗಳಿಗೆ ನೀಡಲಾಗುತ್ತಿದ್ದು, ಈ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಅಭಿವೃದ್ಧಿ , ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರ ಸೇರಿದಂತೆ ಒಟ್ಟು ಮೂರು ಕ್ಷೇತ್ರಗಳಲ್ಲಿ ೧೦ ವರ್ಷಕ್ಕಿಂತ ಹೆಚ್ಚಿನ ಉತ್ತಮ ಸೇವೆಯನ್ನು ಸಲ್ಲಿರುವಂತಹ ೦೩ ವ್ಯಕ್ತಿಗಳಿಗೆ ರಾಷ್ಟ್ರಪ್ರಶಸ್ತಿಯನ್ನು ನೀಡಲಾಗುವುದು. ಪ್ರತಿ ವರ್ಷ ರಾಜೀವ್‌ಗಾಂಧಿಯವರ ಹುಟ್ಟಿದ ದಿನವಾದ ಆಗಸ್ಟ್ ೨೦ ರಂದು ಆಯ್ಕೆಯಾದ ವ್ಯಕ್ತಿಗಳ ಹೆಸರನ್ನು ಘೋಷಿಸಿ, ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರತಿ ಪ್ರಶಸ್ತಿಯು ರೂ. ೧ ಲಕ್ಷ ಗಳ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುತ್ತಿರುವ ಅಧಿಕಾರಿಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ೨೦೧೧ ನೇ ವರ್ಷದ ರಾಜೀವಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಜೂ. ೦೬ ಕೊನೆಯ ದಿನಾಂಕವಾಗಿದ್ದು, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಯವರು ಅರ್ಜಿ ಸಲ್ಲಿಸಲು ಜೂ. ೨೫ ಕೊನೆಯ ದಿನಾಂಕವಾಗಿದೆ. ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಪಡೆದು, ಆಂಗ್ಲ ಭಾಷೆಯಲ್ಲಿ ತ್ರಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದ ಒಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

0 comments:
Post a Comment
Click to see the code!
To insert emoticon you must added at least one space before the code.