PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಸೆ. : ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ಸೆ. ೨೬ ರಂದು ಬಿಸರಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ ೫೩ ರಲ್ಲಿ ನಡೆದ ಮತದಾನದಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿನ ದೋಷದಿಂದಾಗಿ ಈ ಮತಗಟ್ಟೆಯಲ್ಲಿ ಸೆ. ೨೮ ರಂದು ಬುಧವಾರ ಮರು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
  ಬಿಸರಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ ೫೩ ರಲ್ಲಿ ಸೆ. ೨೮ ರಂದು ಬುಧವಾರ ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಾರಂಭಗೊಂಡು ಸಂಜೆ ೫ ಗಂಟೆಗೆ ಮುಕ್ತಾಯಗೊಳ್ಳಲಿದೆ.  ಈ ಮತಗಟ್ಟೆ ಒಟ್ಟು ೬೯೧ ಮತದಾರರ ಸಂಖ್ಯೆಯನ್ನು ಹೊಂದಿದ್ದು, ಈ ಪೈಕಿ ೩೪೭ ಪುರುಷರು ಹಾಗೂ ೩೪೪ ಮಹಿಳಾ ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.

27 Sep 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top