PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಸೆ.   : ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ನಿಮಿತ್ತ ಮತ ಎಣಿಕೆ ಪ್ರಕ್ರಿಯೆ ಸೆ. ೨೯ ರಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
  ಮತ ಎಣಿಕೆ ಕಾರ್ಯ ಸುಗಮವಾಗಿ ಜರುಗಿಸಲು ಹಾಗೂ ಈ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಗಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರದೇಶದಲ್ಲಿ ಸೆ. ೨೮ ರಂದು ಸಂಜೆ ೦೬ ಗಂಟೆಯಿಂದ ಅಕ್ಟೋಬರ್ ೦೧ ರಂದು ಬೆಳಿಗ್ಗೆ ೦೬ ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಲಂ. ೧೪೪ ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಇದರನ್ವಯ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದ್ದು, ೦೫ ಕ್ಕಿಂತ ಹೆಚ್ಚಿಗೆ ಜನರು ಒಟ್ಟಾಗಿ ಓಡಾಡುವುದನ್ನು ಹಾಗೂ ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ.  ಮದುವೆ, ಶವಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

28 Sep 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top