ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರು, ಸಂಪೂರ್ಣವಾಗಿಯೂ ಮೆರಿಟ್ ಆಧಾರದಲ್ಲೇ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಪ್ರಶಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ಪ್ರಭಾವಕ್ಕೆ ಮಣಿದಿಲ್ಲ. ಆ ಸಂಬಂಧ ಪಟ್ಟಿ ಉದ್ದ ಮಾಡುವ ಅಥವಾ ಮತ್ತೊಂದು ಉದ್ದ ಮಾಡುವ ಕೆಲಸಕ್ಕೆ ಮುಂದಾಗುವುದಿಲ್ಲ. ಏಕಲವ್ಯ ಪ್ರಶಸ್ತಿ ಲಿಸ್ಟ್‌ನಂತೆ ಸಂಪೂರ್ಣವಾಗಿ ಅರ್ಹತೆ ಆಧಾರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ನಡೆಯಲಿದೆ ಎಂಬುದನ್ನು ಸಿಎಂ ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.
50 ಸಾಧಕರಿಗೆ ಮಾತ್ರ ಪ್ರಶಸ್ತಿ...ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಈ ಬಾರಿ 50 ಸಾಧಕರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಪ್ರತಿ ಜಿಲ್ಲೆಗೆ ಒಂದರಂತೆ 30 ಜಿಲ್ಲೆಗಳಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂಬುದನ್ನು ಮುಖ್ಯಮಂತ್ರಿ ತಿಳಿಸಿದ್ದಾರೆ.
ನಮ್ಮ ಮುಂದೆ ಸಾಕಷ್ಟು ಒತ್ತಡಗಳಿದ್ದರೂ ಅವುಗಳಿಂದ ಹೊರಬರುವ ಪ್ರಯತ್ನ ಮಾಡಲಾಗುವುದು. ಅರ್ಹತೆ ಇದ್ದರೆ ಸಾಧನೆ ಮಾಡಿದವರಿಗೆ ಮಾತ್ರ ಪ್ರಶಸ್ತಿ ನೀಡಲಾಗುವುದು. ಅದನ್ನು ಹೊರತುಪಡಿಸಿ ಹೆಚ್ಚು ಕೊಡುವು ಪ್ರಶ್ನೆ ಇಲ್ಲ ಎಂದು ಜನತಾ ದರ್ಶನ ನಂತರ ಮಾಧ್ಯಮದ ಜತೆ ಮಾತನಾಡಿದ ಸಿಎಂ ಸದಾನಂದ ಗೌಡ ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.