ಕೊಪ್ಪಳ ಅ. : ಕನ್ನಡ ರಾಜ್ಯೋತ್ಸವದ ನಿಮಿತ್ಯ ಜಿಲ್ಲೆಯ ಎಲ್ಲಾ ಚಲನ ಚಿತ್ರಮಂದಿರಗಳಲ್ಲಿ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಕಡ್ಡಾಯವಾಗಿ ಕನ್ನಡ ಚಲನ ಚಿತ್ರಗಳನ್ನು ಪ್ರದರ್ಶಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
ನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ನಿಮಿತ್ತ ಜಿಲ್ಲೆಯ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸುವಂತೆ ವೀರ ಕನ್ನಡಿಗ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಇವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು, ವಿವಿಧ ಸಂಘಟನೆಗಳ ಮನವಿಯನ್ನು ಪುರಸ್ಕರಿಸಲಾಗಿದ್ದು, ಕನ್ನಡ ರಾಜ್ಯೋತ್ಸವ ನಿಮಿತ್ಯ ಕೊಪ್ಪಳ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ನವೆಂಬರ್ ೧ ರಿಂದ ೭ ರವರೆಗೆ ಒಂದು ವಾರದ ಮಟ್ಟಿಗೆ ಕಡ್ಡಾಯವಾಗಿ ಕನ್ನಡ ಚಲನ ಚಿತ್ರಗಳನ್ನು ಪ್ರದರ್ಶಿಸುವಂತೆ ಕೊಪ್ಪಳ ಜಲ್ಲೆಯ ಎಲ್ಲಾ ಚಿತ್ರಮಂದಿರಗಳ ಮಾಲೀಕರಿಗೆ ಆದೇಶಿಸಲಾಗಿದ್ದು. ಈ ಆದೇಶವನ್ನು ಪಾಲಿಸದೇ ಇದ್ದಲ್ಲಿ ಅಂತಹ ಚಲನ ಚಿತ್ರಮಂದಿರದ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.