PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಅ. : ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ, ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನ. ೦೪ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  
ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕ ಸಂಗಣ್ಣ ಕರಡಿ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಕರಕುಶಲ ನಿಗಮದ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದರಾದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ತಂಡಗಡಿ, ಹಾಲಪ್ಪ ಆಚಾರ್ ಸೇರಿದಂತೆ ಜಿ.ಪಂ.ಉಪಾಧ್ಯಕ್ಷೆ ಸೀತಾ ಜಿ.ಹಲಗೇರಿ, ರಾಜ್ಯ ಸರಕಾರಿ ನೌಕರರ ಸಂಘ ಕೊಪ್ಪಳ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ಪ್ರಾಧಿಕಾರ ಅಧ್ಯಕ್ಷ ಕಳಕಪ್ಪ ಜಾಧವ, ತಾ.ಪಂ.ಅಧ್ಯಕ್ಷ ಅಮರೇಶ ಉಪಲಾಪುರ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಚ್.ಕಾಕನೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ್ ಮತ್ತಿತರ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.  
ಸ್ಪರ್ಧೆಗಳ ವಿವರ : ಈ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಜನಪದ ಗೀತೆ, ನಾಟಕ (ಹಿಂದಿ ಅಥವಾ ಇಂಗ್ಲೀಷ್), ಭರತನಾಟ್ಯ, ತಬಲಾ ಸೋಲೋ, ಕೊಳಲು, ಶಾಸ್ತ್ರೀಯ ಸಂಗೀತ, ವೀಣಾ, ಆಶು ಭಾಷಣ, ಶಾಸ್ತ್ರೀಯ ಸಂಗೀತ, ಕುಚುಪುಡಿ ನೃತ್ಯ, ಗಿಟಾರ್ ಸೋಲೊ, ಹಾರ್ಮೊನಿಯಂ,  ಸೇರಿದಂತೆ ಒಟ್ಟು ೧೬ ಕಲೆಗಳ ಸ್ಪರ್ಧೆಗಳನ್ನು ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲಿ ಸಂಘಟಿಸಲಾಗುವುದು. ಕಾರಣ ಈ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ತಾಲೂಕಿನ ಯುವಕ-ಯುವತಿಯರು, ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ವಯೋಮಿತಿಯ ಧೃಢೀಕರಣದೊಂದಿಗೆ ತಮ್ಮ ಹೆಸರುಗಳನ್ನು ನೊಂದಾಯಿಸಲು ಸೂಚಿಸಲಾಗಿದೆ. 
ಭಾಗವಹಿಸುವ ಸ್ಪರ್ಧಾಳುಗಳಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆ ನೀಡುವುದಿಲ್ಲ, ಊಟೋಪಹಾರದ ವ್ಯವಸ್ಥೆ ಮಾಡಲಾಗಿದ್ದು, ಎಂದಿನಂತೆ ತಮ್ಮ ಸ್ಪರ್ಧೆಯ ಸಂಗೀತ ವಾದ್ಯಗಳೊಂದಿಗೆ ಹಾಜರಿರಲು ಸೂಚಿಸಲಾಗಿದೆ. ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಮಾತ್ರ ಇಲಾಖೆವತಿಯಿಂದ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಜಿಲ್ಲಾಮಟ್ಟದಲ್ಲಿ ವಿಜೇತ ಸ್ಪರ್ಧಾಳುಗಳು ದಿನಾಂಕ ೦೪-೧೧-೨೦೧೧ ರಂದು ಬೆಳಿಗ್ಗೆ ೯.೦೦ರೊಳಗಾಗಿ ಅಲ್ಲಿ ಹಾಜರಿದ್ದು, ತಮ್ಮ ಹೆಸರುಗಳನ್ನು ನೊಂದಾಯಿಸುವುದು ಹಾಗೂ ಯಾವುದೇ ಗದ್ದಲ-ಗಲಾಟೆಯಾಗದಂತೆ ತಮ್ಮ ಉಡುಪು-ತೊಡಪುಗಳೊಂದಿಗೆ ಹಾಜರಿರಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಎನ್.ಎಸ್.ಪಾಟೀಲ್ ೯೯೮೦೮೫೨೭೩೫, ಅಥವಾ ಕಛೇರಿ ದೂರವಾಣಿ ಸಂಖ್ಯೆ ೦೮೫೩೯-೨೦೧೪೦೦ಗೆ ಸಂಪರ್ಕಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಎನ್.ಘಾಡಿ ಪ್ರಕಟಣೆಯಲ್ಲಿ ಕೋರಿದ್ದಾರೆ. 

31 Oct 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top