ಕೊಪ್ಪಳ ನ. ಕರ್ನಾಟಕ ರಾಜ್ಯ ಗೃಹರಕ್ಷಕದಳ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಜಿಲ್ಲಾಡಾಳಿತ, ಪೊಲೀಸ್ ಇಲಾಖೆ, ಎನ್.ಸಿ.ಸಿ., ಎನ್.ಎಸ್.ಎಸ್., ಭಾರತ ಸೇವಾ ದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಪತ್ತು ಕಡಿಮೆಗೊಳಿಸುವ ದಿನಾಚರಣೆಯ ರ್‍ಯಾಲಿ ಹಾಗೂ ಸಮಾರಂಭ ನ. ೨೯ ರಂದು ಜಿಲ್ಲಾ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ರಾಷ್ಟ್ರೀಯ ವಿಪತ್ತು ಕಡಿಮೆಗೊಳಿಸುವ ದಿನಾಚರಣೆ ಅಂಗವಾಗಿ ವಿಶೇಷ ರ್‍ಯಾಲಿ ನ. ೨೯ ರಂದು ಬೆಳಿಗ್ಗೆ ೮-೪೫ ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಾರ್ಯಾಲಯ ಆವರಣದಿಂದ ಪ್ರಾರಂಭವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರು ರ್‍ಯಾಲಿಯ ಉದ್ಘಾಟನೆ ನೆರವೇರಿಸುವರು. ಸಮಾರಂಭ ಅಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಪೊಲೀಸ್ ಕಲ್ಯಾಣಮಂಟಪದಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಸುಧೀರಸಿಂಹ ಘೋರ್ಪಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೧೧-೩೦ ಗಂಟೆಗೆ ಗೃಹರಕ್ಷಕ ದಳ ಹಾಗೂ ಅಗ್ನಿಶಾಮಕ ದಳದ ವತಿಯಿಂದ ವಿಪತ್ತು ನಿಯಂತ್ರಣ ಮತ್ತು ತಡೆ ಕುರಿತಂತೆ ಜಿಲ್ಲಾ ಪೊಲೀಸ್ ಕಲ್ಯಾಣ ಮಂಟಪದ ಆವರಣದಲ್ಲಿ ಅಣಕು ಪ್ರದರ್ಶನ ನಡೆಯಲಿದೆ.
0 comments:
Post a Comment
Click to see the code!
To insert emoticon you must added at least one space before the code.