PLEASE LOGIN TO KANNADANET.COM FOR REGULAR NEWS-UPDATES


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಯನ್ನು ಯಾವುದೇ ಕಾರಣಕ್ಕೂ ಮುಂದೂಡುವ ಪ್ರಶ್ನೆಯೇ ಇಲ್ಲ. ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದರು.

ಶುಕ್ರವಾರ ವಿಧಾನಸೌಧದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, `ಸಾಹಿತ್ಯ ಪರಿಷತ್ ಚುನಾವಣೆಯನ್ನು ಸಕಾಲಕ್ಕೆ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬದ್ಧವಾಗಿದೆ.  ಫೆಬ್ರುವರಿ 26ರೊಳಗೆ ಕ.ಸಾ.ಪ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ` ಎಂದು ಸ್ಪಷ್ಟಪಡಿಸಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಅವಧಿ ಪೂರ್ಣಗೊಂಡಿರುವ ಮತ್ತು ಕೆಲ ದಿನಗಳಲ್ಲಿ ಪೂರ್ಣಗೊಳ್ಳಲಿರುವ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಮುಂದುವರಿಸುವ ಪ್ರಶ್ನೆಯೇ ಇಲ್ಲ. ಹೊಸದಾಗಿಯೇ ನೇಮಕಾತಿ ಮಾಡಲಾಗುವುದು ಈ ವಿಷಯದಲ್ಲಿ ಸರ್ಕಾರ ಸ್ಪಷ್ಟವಾದ ತೀರ್ಮಾನ ಕೈಗೊಂಡಿದೆ` ಎಂದರು.
30 Dec 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top