): ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವುದು, ನಗರ ಆಶ್ರಯ ಯೋಜನೆಯಡಿ, ಬಡಾವಣೆಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಕೊಪ್ಪಳ ಕ್ಷೇತ್ರಕ್ಕೆ ೫. ೬೨ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ಸಲುವಾಗಿ ವಾಜಪೇಯಿ ನಗರ ನಿವೇಶನ ಯೋಜನೆಯಡಿ ಒಟ್ಟು ೫೮. ೦೪ ಎಕರೆ ಜಮೀನನ್ನು ಪ್ರತಿ ಎಕರೆಗೆ ೭. ೯೫ ಲಕ್ಷ ರೂ.ಗಳಂತೆ ಖರೀದಿಸಲು ಸರ್ಕಾರ ಅನುಮೋದನೆ ನೀಡಿ, ಇದಕ್ಕಾಗಿ ಅಗತ್ಯವಿರುವ ಒಟ್ಟು ೪. ೬೨ ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ. ನಗರ ಆಶ್ರಯ ಯೋಜನೆಯಡಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಮಾಲರಿಗೆ ಹಾಗೂ ಇತರೆ ಫಲಾನುಭವಿಗಳಿಗೆ ವಸತಿ ಕಲ್ಪಿಸಲು ನಿವೇಶನ ಅಭಿವೃದ್ಧಿಪಡಿಸಿ, ಮನೆಗಳ ನಿರ್ಮಾಣಕ್ಕಾಗಿ ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ನಗರಸಭೆ ವ್ಯಾಪ್ತಿಯಡಿ ಬರುವ ಹೊರತಟ್ನಾಳ ಹಾಗೂ ಗುನ್ನಳ್ಳಿ ಬಡವಾಣೆಯಲ್ಲಿ ಫಲಾನುಭವಿಗಳಿಗೆ ವಸತಿ ಕಲ್ಪಿಸಿ, ನಿವೇಶನ ಅಭಿವೃದ್ಧಿಪಡಿಸುವ ಸಲುವಾಗಿ ಇಂತಹ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಎರಡೂ ಯೋಜನೆಗಳಿಗೆ ತಲಾ ೫೦ ಲಕ್ಷ ರೂ.ಗಳಂತೆ ಒಟ್ಟು ೦೧ ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟಾರೆ ಕೊಪ್ಪಳ ಕ್ಷೇತ್ರದ ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೊಪ್ಪಳಕ್ಕೆ ಒಟ್ಟು ೫. ೬೨ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿದ್ದು, ಇದಕ್ಕಾಗಿ ಸಹಕರಿಸಿದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಸಂಸದ ಶಿವರಾಮಗೌಡ ಸೇರಿದಂತೆ ಎಲ್ಲಾ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳಿಗೆ ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.