ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಏ. ೨೫ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ೮ ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಬೆ. ೯-೪೫ ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲೂಕು ಶಿರೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ಹಿರೇಹಳ್ಳ ಯೋಜನೆಯಡಿ ಮುಳುಗಡೆಯಾದ ಗ್ರಾಮಗಳಾದ ಶಿರೂರು, ಹೀರಾಪುರ, ಮುತ್ತಾಳ ಮತ್ತು ಮುದ್ಲಾಪುರ ಗ್ರಾಮಗಳ ಪುನರ್ವಸತಿ ಯೋಜನೆಯಡಿ ಸಂತ್ರಸ್ಥ ಫಲಾನುಭವಿಗಳಿಗೆ ಪರಿಹಾರ ಧನದ ಚೆಕ್ ಮತ್ತು ಹಕ್ಕು ಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸುವರು. ಬೆ. ೧೦-೩೦ ಗಂಟೆಗೆ ಕೊಪ್ಪಳ ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಶಾಸಕರು, ಸಂಸದರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.
0 comments:
Post a Comment
Click to see the code!
To insert emoticon you must added at least one space before the code.