ಬೆಂಗಳೂರು, ಮೇ: ಕೇಂದ್ರ ಸರಕಾರ ಮಾಡಿರುವ ಪೆಟ್ರೋಲ್ ಬೆಲೆ ಹೆಚ್ಚಳ ಖಂಡಿಸಿ ಗುರುವಾರ ಎನ್‌ಡಿಎ, ಎಡಪಕ್ಷ ಹಾಗೂ ಇತರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದ್ದು, ದೈನಂದಿನ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.ಭಾರತ್ ಬಂದ್‌ಗೆ ಆಡಳಿತಾರೂಢ ಬಿಜೆಪಿ ಕೂಡಾ ಬೆಂಬಲ ವ್ಯಕ್ತಪಡಿಸಿದ್ದು, ಇದರಿಂದ ರಾಜ್ಯದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಲಿದೆ.ಯುಪಿಎ ನೇತೃತ್ವದ ಕೇಂದ್ರ ಸರಕಾರ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಬೆಲೆಯೇರಿಸಿದ್ದು, ಇದನ್ನು ಖಂಡಿಸಿ ಭಾರತ್ ಬಂದ್‌ಗೆ ಎನ್‌ಡಿಎ ಇತರ ಪಕ್ಷಗಳು ಕರೆ ನೀಡಿರುವುದರಿಂದ ಶಾಲಾ-ಕಾಲೇಜು, ಬ್ಯಾಂಕುಗಳು ಸೇರಿದಂತೆ ಸರಕಾರಿ ಕಚೇರಿಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.ಬಸ್, ವಾಹನ ಸಂಚಾರ ಕೂಡ ಸ್ಥಗಿತಗೊಳ್ಳಲಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ನಾಳೆ ನಡೆಯಲಿರುವ ಪರೀಕ್ಷೆಗಳನ್ನು ಮುಂದೂಡಿವೆ. ಸರಕಾರ ಶಾಲಾ-ಕಾಲೇಜುಗಳಿಗೆ ಅಧಿಕೃತ ರಜೆ ಘೋಷಿಸಿಲ್ಲ. ಜೊತೆಗೆ ಬೆಂಗಳೂರು ನಗರದಲ್ಲಿರುವ ಬಿಎಂಟಿಸಿ ಬಸ್‌ಗಳು ಸ್ಥಗಿತಗೊಳಿಸುವುದಿಲ್ಲ ಎಂದು ಬಿಎಂಟಿಸಿ ಮುಖ್ಯಸ್ಥರು ತಿಳಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಬಸ್ ಸೇರಿದಂತೆ ಇನ್ನಿತರ ಸಂಚಾರಿ ವಾಹನಗಳು ಸ್ಥಗಿತಗೊಳ್ಳಲಿದೆ.ಎಡಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಆಟೊ ಚಾಲಕರ ಸಂಘಟನೆಗಳು ಕೂಡಾ ಬಂದ್‌ಗೆ ಬೆಂಬಲ ಸೂಚಿಸಿವೆ. ಭಾರತ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಪಿಎನ್ ಗೋಪಾಲಕೃಷ್ಣ ಹೇಳಿದ್ದಾರೆ.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ರಾಜ್ಯ ಮೀಸಲು ಪಡೆಯ ತುಕಡಿಗಳು ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದಿದ್ದಾರೆ.
ಬೆಂಗಳೂರು, ಮೇ 30: ಕೇಂದ್ರ ಸರಕಾರ ಮಾಡಿರುವ ಪೆಟ್ರೋಲ್ ಬೆಲೆ ಹೆಚ್ಚಳ ಖಂಡಿಸಿ ಗುರುವಾರ ಎನ್‌ಡಿಎ, ಎಡಪಕ್ಷ ಹಾಗೂ ಇತರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದ್ದು, ದೈನಂದಿನ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.ಭಾರತ್ ಬಂದ್‌ಗೆ ಆಡಳಿತಾರೂಢ ಬಿಜೆಪಿ ಕೂಡಾ ಬೆಂಬಲ ವ್ಯಕ್ತಪಡಿಸಿದ್ದು, ಇದರಿಂದ ರಾಜ್ಯದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಲಿದೆ.ಯುಪಿಎ ನೇತೃತ್ವದ ಕೇಂದ್ರ ಸರಕಾರ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಬೆಲೆಯೇರಿಸಿದ್ದು, ಇದನ್ನು ಖಂಡಿಸಿ ಭಾರತ್ ಬಂದ್‌ಗೆ ಎನ್‌ಡಿಎ ಇತರ ಪಕ್ಷಗಳು ಕರೆ ನೀಡಿರುವುದರಿಂದ ಶಾಲಾ-ಕಾಲೇಜು, ಬ್ಯಾಂಕುಗಳು ಸೇರಿದಂತೆ ಸರಕಾರಿ ಕಚೇರಿಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.ಬಸ್, ವಾಹನ ಸಂಚಾರ ಕೂಡ ಸ್ಥಗಿತಗೊಳ್ಳಲಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ನಾಳೆ ನಡೆಯಲಿರುವ ಪರೀಕ್ಷೆಗಳನ್ನು ಮುಂದೂಡಿವೆ. ಸರಕಾರ ಶಾಲಾ-ಕಾಲೇಜುಗಳಿಗೆ ಅಧಿಕೃತ ರಜೆ ಘೋಷಿಸಿಲ್ಲ. ಜೊತೆಗೆ ಬೆಂಗಳೂರು ನಗರದಲ್ಲಿರುವ ಬಿಎಂಟಿಸಿ ಬಸ್‌ಗಳು ಸ್ಥಗಿತಗೊಳಿಸುವುದಿಲ್ಲ ಎಂದು ಬಿಎಂಟಿಸಿ ಮುಖ್ಯಸ್ಥರು ತಿಳಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಬಸ್ ಸೇರಿದಂತೆ ಇನ್ನಿತರ ಸಂಚಾರಿ ವಾಹನಗಳು ಸ್ಥಗಿತಗೊಳ್ಳಲಿದೆ.
ಎಡಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಆಟೊ ಚಾಲಕರ ಸಂಘಟನೆಗಳು ಕೂಡಾ ಬಂದ್‌ಗೆ ಬೆಂಬಲ ಸೂಚಿಸಿವೆ. ಭಾರತ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಪಿಎನ್ ಗೋಪಾಲಕೃಷ್ಣ ಹೇಳಿದ್ದಾರೆ.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ರಾಜ್ಯ ಮೀಸಲು ಪಡೆಯ ತುಕಡಿಗಳು ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದಿದ್ದಾರೆ.
ಇಂದಿನ ಪರೀಕ್ಷೆ ಮುಂದೂಡಿಕೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿವಿಯ ಪರೀಕ್ಷೆಗಳನ್ನು ಭಾರತ್ ಬಂದ್‌ನ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.ಮೈಸೂರು ವಿವಿಯ ಮೊದಲ ವರ್ಷದ ಸ್ನಾತಕೋತ್ತರ ಪದವಿಯ ಪರೀಕ್ಷೆಯನ್ನು ಜೂ.15ಕ್ಕೆ ಮುಂದೂಡಲಾಗಿದೆ.ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ನಾಳಿನ ಪರೀಕ್ಷೆಯನ್ನು ಜೂ.9ಕ್ಕೆ ಮುಂದೂಡಲಾಗಿದೆ. ಜೊತೆಗೆ ಎಲ್ಲ ವಿವಿಗಳ ನಾಳಿನ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಾಳೆ ಆಯೋಜಿಸಿದ್ದ ಕರ್ನಾಟಕ ಮುಕ್ತ ಶಾಲೆಗಳ ಕನ್ನಡ ಪ್ರಥಮ ಭಾಷೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕೆಎಸ್ಸಾರ್ಟಿಸಿ, ಬಿಎಂಟಿಸಿ ಸ್ಥಗಿತವಿಲ್ಲ
ಭಾರತ್ ಬಂದ್ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಹಾಗೂ ನಗರದ ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚಾರ ನಡೆಸಲಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿನ ಪರಿಸ್ಥಿತಿ ಅವಲೋಕಿಸಿ ಬಸ್ ಸಂಚಾರ ಮುಂದುವರಿಸಬೇಕೋ ಬೇಡವೊ ಎಂಬುದನ್ನು ನಿರ್ಧರಿಸಲಾಗುವುದು ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಅಶೋಕ್ ಕುಮಾರ್ ಹಾಗೂ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ನಾಗರಾಜ್ ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.