ಕೊಪ್ಪಳ ವಾರ್ತಾ ಇಲಾಖೆಯು ತಾಲೂಕಿನ ಅಳವಂಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಮತ್ತು ಸಾಮಾಜಿಕ ಹೊಣೆಗಾರಿಕೆ ವಿಷಯ ಕುರಿತ ವಿಚಾರಸಂಕಿರಣವನ್ನು ಜು. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಅಳವಂಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಆಗಿರುವ ಸಂಗಣ್ಣ ಕರಡಿ ಅವರು ವಿಚಾರಸಂಕಿರಣದ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಶಿವರಾಮಗೌಡ, ಶಾಸಕ (ವಿಧಾನಪರಿಷತ್) ಹಾಲಪ್ಪ ಆಚಾರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಜಿ.ಪಂ. ಸದಸ್ಯ ನಾಗನಗೌಡ ಮಾಲಿಪಾಟೀಲ, ತಾ.ಪಂ. ಸದಸ್ಯೆ ಮುದ್ದಮ್ಮ ರಂಗಪ್ಪ ಕರಡಿ, ಎಪಿಎಂಸಿ ಸದಸ್ಯೆ ಗಂಗಮ್ಮ ಶಂಕರಪ್ಪ ಕಲಾದಗಿ, ಕಾಲೇಜಿನ ಪ್ರಾಚಾರ್ಯ ಎಸ್.ಆರ್. ಚಿಗರಿ ಅವರು ವಹಿಸುವರು. ಗ್ರಾ.ಪಂ. ಅಧ್ಯಕ್ಷೆ ಸುನಂದಮ್ಮ ಗದ್ದಿಕೇರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದ ಅಂಗವಾಗಿ, ಹಿರಿಯ ಪತ್ರಕರ್ತ ವಿಠ್ಠಪ್ಪ ಗೋರಂಟ್ಲಿ, ಕೊಪ್ಪಳ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಭುರಾಜ ನಾಯಕ್ ಹಾಗೂ ಪತ್ರಕರ್ತ ಸೋಮರಡ್ಡಿ ಅಳವಂಡಿ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.