ರಾಜ್ಯದ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರು ಜು. ೨೮ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು, ಕೊಪ್ಪಳ ತಾಲೂಕು ಬಸಾಪುರ ಬಳಿಯ ಎಂಎಸ್‌ಪಿಎಲ್ ಏರ್‌ಸ್ಟ್ರಿಪ್‌ಗೆ ಆಗಮಿಸುವರು. ನಂತರ ಕೊಪ್ಪಳಕ್ಕೆ ಆಗಮಿಸಿ, ಶ್ರೀ ಗವಿಮಠಕ್ಕೆ ಭೇಟಿ ನೀಡುವರು, ಇರಕಲ್ಲಗಡಾ ಗ್ರಾಮದಲ್ಲಿನ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು, ಕೋಳರು ಗ್ರಾಮದಲ್ಲಿನ ಕೆರೆ ಹೂಳೆತ್ತುವ ಕಾಮಗಾರಿ ಹಾಗೂ ಉದ್ಯೋಗಖಾತ್ರಿ ಯೋಜನೆ ಕಾಮಗಾರಿಗಳ ಪರಿಶೀಲನೆ ನಡೆಸಿ, ಮಧ್ಯಾಹ್ನ ೧೨ ಗಂಟೆಗೆ ಬನ್ನಿಕೊಪ್ಪಳ ಗ್ರಾಮದಲ್ಲಿನ ಉದ್ಯೋಗಖಾತ್ರಿ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸುವರು, ಕೊಪ್ಪಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬರಪರಿಹಾರ ಕಾಮಗಾರಿಗಳ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ ಎಂಎಸ್‌ಪಿಎಲ್ ಏರ್‌ಸ್ಟ್ರಿಪ್‌ನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
0 comments:
Post a Comment
Click to see the code!
To insert emoticon you must added at least one space before the code.