ಕೊಪ್ಪಳ ಜು.೩೧ (ಕ.ವಾ): ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ೯೫ನೇ ಸಭೆ ಆಗಸ್ಟ್ ೦೩ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಮುನಿರಾಬಾದ್‌ನ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ೨೦೧೨ನೇ ಸಾಲಿನ ಮುಂಗಾರು ಹಂಗಾಮಿಗೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ವಿವಿಧ ಕಾಲುವೆಗಳಿಗೆ ನೀರನ್ನು ಒದಗಿಸುವ ಮತ್ತು ಅಧಿಸೂಚನೆ ಹೊರಡಿಸುವ ಕುರಿತು ಚರ್ಚೆ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ್ ಅವರು ವಹಿಸುವರು, ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರುಗಳು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಂಟಿಕೃಷಿ ನಿರ್ದೇಶಕರು, ಮುಂತಾದ ಉನ್ನತ ಅಧಿಕಾರಿಗಳು, ಗಣ್ಯರು ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ತುಝಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಹೆಚ್. ಮಂಜಪ್ಪ ಅವರು ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.