PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ : ನಗರದಲ್ಲಿ ಆರ್ಟ್ ಗ್ಯಾಲರಿ ನಿರ್ಮಿಸಲು ಸ್ಥಳಾವಕಾಶ ಮತ್ತು ಕಟ್ಟಡದ ಸಲುವಾಗಿ ೧೦ ಲಕ್ಷ ರೂ ಅನುದಾನ ಬಿಡುಗಡೆ ಮಾಡುವುದಾಗಿ ಶಾಸಕ ಸಂಗಣ್ಣ ಕರಡಿ ಭರವಸೆ ನೀಡಿದರು.
ಅವರು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಚಿತ್ರಕಲಾ ಶೈಕ್ಷಣಿಕ ಸಂವಾದ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಿತ್ರಕಲೆಗೆ ತನ್ನದೇ ಆದ ಮಹತ್ವವಿದೆ ಮತ್ತು ಚಿತ್ರಕಲಾ ಪ್ರದರ್ಶನ ಅಗತ್ಯವಿದೆ ಎಂದರು.
ಮುಖ್ಯ ಅಥಿತಿಗಳಾಗಿ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಜಿ. ಅವಟಿ, ಕಾರ್ಯದರ್ಶಿ ಎಮ್.ಎ. ಕಂಠಿ ಮತ್ತು ಡಿ.ಎಸ್.ಇ.ಆರ್.ಟಿ. ಕಲಾವಿದರಾದ ಜಿ.ಎಮ್. ಜಂಗಿ ಗುಲ್ಬರ್ಗಾ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಟಿ. ದೇವೆಂದ್ರಪ್ಪ ರಾಜ್ಯ ಸಂಘಟನೆಯ ಕಾರ್ಯದರ್ಶಿ ಬಸವರಾಜ ಗೊಂದಳೆ, ಭಾಗವಹಿಸಿದ್ದರು.
ಈ ಸಂಧರ್ಬದಲ್ಲಿ ಶಾಸಕ ಸಂಗಣ್ಣ ಕರಡಿ ಹಾಗೂ ನಗರ ಪ್ರಾಧಿಕಾರದ ಅಧ್ಯಕ್ಷರಾದ ಅಪ್ಪಣ್ಣ ಪದಕಿ ರಾಜ್ಯ ಸಂಘದ ಪದಾಧಿಕಾರಿಗಳಿಂದ ಸನ್ಮಾನ ಮಾಡಲಾಯಿತು. ಕೊಪ್ಪಳದ ಎಲ್ಲಾ ತಾಲೂಕುಗಳ ಒಬ್ಬ ಚಿತ್ರಕಲಾ ಶಿಕ್ಷಕರಿಗೆ ಸಾಧಕ ಶ್ರೀ ಪ್ರಶಸ್ತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಚಲುವಾದಿ, ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಎನ್.ಆರ್. ಪಂಚಾಕ್ಷರಯ್ಯ, ನಾಗರಾಜ ಸುಣಗಾರ, ಕಳ್ಳಿಮಠ ಶಿಕ್ಷಕರು ಇನ್ನು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎ.ಪಿ. ಮುಧೋಳ, ನಿರ್ವಹಣೆ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಬಿ. ಕುಲಕರ್ಣಿ & ಸಂಘದ ಜಿಲ್ಲಾಧ್ಯಕ್ಷರಾದ ಎಮ್.ಎಮ್. ಬಳಿಗಾರ, ಅಂಬಿಕಾ ಉಪ್ಪಾರ ಸಂಗಡಿಗರು ಪ್ರಾರ್ಥನೆಯನ್ನು ಮಾಡಿದರು.


13 Aug 2012

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top