ಪ್ರಸಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಾಲ್ಕು ವರ್ಷಗಳ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಆದ ಸಾಧನೆಯನ್ನು ಬಿಂಬಿಸುವ ಕಿರುಹೊತ್ತಿಗೆಯನ್ನು ವಾರ್ತಾ ಇಲಾಖೆಯು ಪ್ರಕಟಿಸಿದ್ದು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಬಿಡುಗಡೆ ಮಾಡಿದರು.
ಕೊಪ್ಪಳ ಶಾಸಕ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಮುಂತಾದವರು ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಭಾಗವಹಿಸಿದ್ದರು.
ಶಾಲಾ ಕೊಠಡಿ ಕಾಮಗಾರಿಗೆ ಭೂಮಿಪೂಜೆ
ಕೊಪ್ಪಳ ನಗರದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಎರಡು ನೂತನ ಶಾಲಾ ಕೊಠಡಿಗಳನ್ನು ಕಾಮಗಾರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಭೂಮಿಪೂಜೆ ನೆರವೇರಿಸಿದರು.
ಕೊಪ್ಪಳ ನಗರದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಈಗಾಗಲೆ ಕೇಂದ್ರೀಯ ವಿದ್ಯಾಲಯವು ಸಹ ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ, ಶಾಸಕ ಸಂಗಣ್ಣ ಕರಡಿ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ ೧೧ಲಕ್ಷ ರೂ. ಹಾಗೂ ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. ೩ ಲಕ್ಷ ಸೇರಿದಂತೆ ಒಟ್ಟು ೧೪ಲಕ್ಷ ರೂ.ಗಳ ವೆಚ್ಚದಲ್ಲಿ ಎರಡು ಹೆಚ್ಚುವರಿ ಶಾಲಾ ಕೊಠಡಿ ನಿರ್ಮಿಸುವ ಕಾಮಗಾರಿಗೆ ಸಚಿವ ಮುರುಗೇಶ್ ನಿರಾಣಿ ಅವರು ಭೂಮಿಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
ಕೊಪ್ಪಳ ಶಾಸಕ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಉಪಾಧ್ಯಕ್ಷ ಅಮ್ಜದ್ ಪಟೇಲ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 comments:
Post a Comment
Click to see the code!
To insert emoticon you must added at least one space before the code.