PLEASE LOGIN TO KANNADANET.COM FOR REGULAR NEWS-UPDATES



  ಜನರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಜನಸ್ಪಂದನ ಸಭೆಗಳನ್ನು ಸರ್ಕಾರ ಆಯೋಜಿಸಿದ್ದು, ಅಧಿಕಾರಿಗಳು ಜನರ ಆಶಯಗಳಿಗೆ ಸ್ಪಂದಿಸುವಂತಾಗಬೇಕು ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಹೇಳಿದರು.
  ಕೊಪ್ಪಳ ತಾಲೂಕು ಕೊಳೂರು ಗ್ರಾಮದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜನಸ್ಪಂದನಾ ಸಭೆಯ  ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. 
  ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ಅವರ ಮನೆಬಾಗಿಲಿಗೆ ಸರ್ಕಾರಿ ಸವಲತ್ತುಗಳನ್ನು ತಲುಪಿಸಲು ಜಾರಿಗೊಂಡಿರುವ ಜನಸ್ಪಂದನ ಸಭೆ, ಅರ್ಹ ಫಲಾನುಭವಿಗಳಿಗೆ ವರವಾಗಿ ಪರಿಣಮಿಸಿದೆ.  ಜನರು ತಮ್ಮ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಿಕೊಳ್ಳಲು ಇದು ಸಹಾಯಕಾರಿಯಾಗಿದೆ.  ಎಲ್ಲ ಅಧಿಕಾರಿಗಳು ಗ್ರಾಮಗಳಿಗೆ ಆಗಮಿಸಿ, ಜನರ ಸಮಸ್ಯೆಗಳು, ಕುಂದುಕೊರತೆ ಅಹವಾಲುಗಳನ್ನು ಆಲಿಸಿ, ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಬಹುದಾಗಿದೆ.  ಸರ್ಕಾರಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂಬ ಸರ್ಕಾರದ ಆಶಯ ಜನಸ್ಪಂದನ ಸಭೆಗಳಿಂದ ಈಡೇರಬಹುದಾಗಿದೆ.  ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.  ಕರ್ತವ್ಯದಲ್ಲಿ ನಿರ್ಲಕ್ಷ್ಯತೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಹಿಂಜರಿಯುವುದಿಲ್ಲ ಎಂದು ಕೊಪ್ಪಳ ಶಾಸಕರಾದ ಸಂಗಣ್ಣ ಕರಡಿ ಅವರು ಎಚ್ಚರಿಕೆ ನೀಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರಾದ ಮಂಜುಳಾ ಅವರು ಮಾತನಾಡಿ, ರೈತರು ತಮ್ಮ ಜಮೀಣಿಗೆ ಹೆಚ್ಚು, ಹೆಚ್ಚಾಗಿ ಯೂರಿಯಾ ಗೊಬ್ಬರವನ್ನು ಉಪಯೋಗಿಸುತ್ತಿದ್ದು,  ಅಗತ್ಯವಿರುವಷ್ಟು ಮಾತ್ರ ಯೂರಿಯಾ ರಸಗೊಬ್ಬರ ಬಳಕೆ ಮಾಡಬೇಕು,   ಅಲ್ಲದೆ ಇತರೆ ಡಿಎಪಿ ಹಾಗೂ ಲವಣಾಂಶಗಳಿರುವ ಗೊಬ್ಬರಗಳನ್ನು ಬಳಸುವಂತೆ ರೈತರಿಗೆ ಸಲಹೆ ನೀಡಿದರು.
  ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎಲ್.ಗೋಠೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಗ್ರಾ.ಪಂ. ಅಧ್ಯಕ್ಷರು, ಸರ್ವ ಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು, ತಾಲೂಕ ಮಟ್ಟದ ಅಧಿಕಾರಿಗಳು ಹಾಜರಿದ್ದರು.


ಕೊಪ್ಪಳ ನಗರದ ಎನ್.ಹೆಚ್. ೬೩ ರಸ್ತೆ ಪಕ್ಕದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿಯನ್ನು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಶನಿವಾರ ಪರಿಶೀಲನೆ ನಡೆಸಿದರು,  ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

01 Sep 2012

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top