ಕೊಪ್ಪಳ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಂಚಾರ ನಿಯಂತ್ರಣದ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೊಪ್ಪಳದ ನೂತನ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ರವಿ ಪುರುಷೋತ್ತಮ ಅವರು ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅವರು ನಗರದ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಂಚಾರಿ ನಿಯಮದ ತಿಳುವಳಿಕೆ ಕುರಿತ ಸಭೆಯಲ್ಲಿ ಮಾತನಾಡುತ್ತ, ಕೊಪ್ಪಳ ಜಿಲ್ಲಾ ಕೇಂದ್ರವು ಅತೀ ವೇಗದಲ್ಲಿ ಬೆಳೆಯುತ್ತಿದ್ದು, ದಿನನಿತ್ಯ ಸಂಚಾರ ದಟ್ಟಣೆಯಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಜನರಿಗೆ ಅನಕೂಲವಾಗುವುದು, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವರ್ತಕರ ಸಂಘ, ಲಾರಿ ಮಾಲೀಕರ ಸಂಘ, ಆಟೋ ಚಾಲಕರು ಹಾಗೂ ಮಾಲೀಕರ ಸಂಘ, ಮ್ಯಾಕ್ಸಿಕ್ಯಾಬ್, ಟಂಟಂ, ಕ್ರಷರ್ ಜೀಫ್, ಬಂಡಿ ಸಂಘದವರು, ಹಮಾಲರ ಸಂಘದವರು ಇನ್ನೀತರ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದು, ಸುಗಮ ಸಂಚಾರಕ್ಕಾಗಿ ಅಗತ್ಯ ಸಹಕಾರ ನೀಡುವುದಾಗಿ ಸಮ್ಮತಿಸಿದರು.
ಸಭೆಯಲ್ಲಿ ನಗರ ಠಾಣೆಯ ಪಿಎಸ್‌ಐ ಆಂಜನೇಯ ಸೇರಿದಂತೆ ಸಂಚಾರಿ ಠಾಣೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
0 comments:
Post a Comment
Click to see the code!
To insert emoticon you must added at least one space before the code.