PLEASE LOGIN TO KANNADANET.COM FOR REGULAR NEWS-UPDATES


ದಿ. ೨೨ :   ೨೪.೧೨.೧೨, ಸೋಮವಾರ ಮುಂಜಾನೆ ೧೧ ಗಂಟೆಗೆ, ರಾಯಚೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಬಸವಬಾಂಧವ್ಯ ಬೆಸುಗೆ ವ್ಯಕ್ತತ್ವ ವಿಕಸನ ತರಬೇತಿ ಶಿಬಿರ, ಶರಣೆ ಜಯದೇವಿ ತಾಯಿ ಲಿಗಾಡೆಯವರ ಜನ್ಮ ಶತಮಾನೋತ್ಸವ ಮತ್ತು ರಾಯಚೂರು ಜಿಲ್ಲಾ ಬಣಜಿಗರ ಸಮಾವೇಶವನ್ನು ಆಯೋಜಿಸಲಾಗಿದೆ.
ಸಮಾವೇಶದ ಸಾನಿಧ್ಯವನ್ನು ಪೂಜ್ಯ ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿಗಳು, ದಕ್ಷಿಣಕಾಶಿ ಶ್ರೀ ಗವಿಮಠ ಕೆ.ಆರ್.ಪೇಟೆ, ಮಂಡ್ಯ ಇವರು ವಹಿಸಿಕೊಳ್ಳಲಿದ್ದು, ಧ್ವಜಾರೋಹಣವನ್ನು ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಅಗಡಿ, ಅಧ್ಯಕ್ಷತೆಯನ್ನು ರಾಮನಗೌಡ ಜಾಲಿಬೆಂಚಿ ರಾಯಚೂರು ಜಿಲ್ಲಾ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಇವರು ವಹಿಸಿಕೊಳ್ಳಲಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮಾಡಲಿದ್ದಾರೆ. ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ವಿಧಾನ ಪರಿಷತ್ತಿನ ಸದಸ್ಯರಾದ ವೀರಣ್ಣ ಮತ್ತಿಕಟ್ಟಿ ಅವರಲ್ಲದೇ ಕೊಪ್ಪಳ, ರಾಯಚೂರು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು ಭಾಗವಹಿಸಿದ್ದಾರೆ. ಇದೇ ಸಂದರ್ಭದಲ್ಲಿ ವಚನ ಗಾಯನವನ್ನು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದರಾದ ಪಂ. ಸೂಗೂರೇಶ ಅಸ್ಕಿಹಾಳ ಇವರಿಂದ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಮತ್ತು ನೂತನ ವಿಶ್ವಸ್ಥ ಮಂಡಳಿ ಸದಸ್ಯರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದ್ದು ಸಮಾರಂಭದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗವಿಸಿದ್ಧಪ್ಪ ಕೊಪ್ಪಳ  ತಿಳಿಸಿದ್ದಾರೆ.


22 Dec 2012

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top