PLEASE LOGIN TO KANNADANET.COM FOR REGULAR NEWS-UPDATES


 - ಜಿಲ್ಲೆಯಲ್ಲಿ ಫೆ. ೨೪ ರಿಂದ ೨೬ ಎರಡನೆ ಹಂತದದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ೨೦೪೬೬೬ ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ.  ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪುಗಳು, ಶಿಕ್ಷಕರು ಸೇರಿದಂತೆ ಸ್ವಯಂಸೇವಾ ಸಂಸ್ಥೆಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದ್ದಾರೆ.
  ಜಿಲ್ಲೆಯಲ್ಲಿ ಫೆ. ೨೪ ರಿಂದ ೨೬ ರವರೆಗೆ ಎರಡನೆ ಹಂತದ ೦೪ ದಿನಗಳ ಕಾಲ ೦೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯ ೨೦೪೬೬೬ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.  ಆ ಪೈಕಿ ೧೬೭೪೩೦ ಮಕ್ಕಳು ಗ್ರಾಮಾಂತರ ಪ್ರದೇಶದವರಾಗಿದ್ದು, ೩೭೨೩೬ ಮಕ್ಕಳು ನಗರ ಪ್ರದೇಶದವರಾಗಿದ್ದಾರೆ.  ಮಕ್ಕಳಿಗೆ ಪೋಲಿಯೋ ಹನಿ ನೀಡುವ ಸಲುವಾಗಿ ಒಟ್ಟು ೨೭೫೯೬೩ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಒಟ್ಟು ೮೫೩ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.  ಫೆ. ೨೫ ರಿಂದ ೨೬ ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಉಳಿಕೆ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗುವುದು.  ಬಸ್ ನಿಲ್ದಾಣ, ರೈಲು ನಿಲ್ದಾಣ, ಸಂತೆ, ಜಾತ್ರೆಗಳಲ್ಲಿ ವಿಶೇಷ ಬೂತ್‌ಗಳನ್ನು ಸ್ಥಾಪಿಸಿ ಮಕ್ಕಳಿಗೆ ಲಸಿಕೆ ನೀಡಲು ವ್ಯವಸ್ಥೆಗೊಳಿಸಲಾಗಿದೆ.  ಅಲ್ಲದೆ ಕಾರ್ಖಾನೆ ಮತ್ತು ಕಟ್ಟಡ ನಿರ್ಮಾಣ, ಇಟ್ಟಿಗೆ ಭಟ್ಟಿ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿರುವ ಕಾರ್ಮಿಕರ ಮಕ್ಕಳಿಗೂ ಸಹ ಪೋಲಿಯೋ ಲಸಿಕೆ ನೀಡಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಕಡ್ಡಾಯವಾಗಿ ಹಾಜರಿದ್ದು, ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ.  ಪಾಲಕರು ೦೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು.  ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಶಿಕ್ಷಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪುಗಳು, ಲಯನ್ಸ್, ರೋಟರಿ, ಇನ್ನರ್ ವ್ಹೀಲ್ ಹಾಗೂ ಇತರೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿ ಈ ರಾಷ್ಟ್ರೀಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಕೆಲವೊಂದು ಲಸಿಕಾ ಕೇಂದ್ರಗಳು ಶಾಲೆಗಳಲ್ಲಿ ನಿಗದಿಪಡಿಸಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯಲ್ಲಿ ಲಸಿಕಾ ಕೇಂದ್ರಕ್ಕಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಗ್ರಾಮಗಳಲ್ಲಿ ಡಂಗುರ ಸಾರುವುದು, ಮಕ್ಕಳಿಂದ ಪ್ರಬಾತ ಫೇರಿ, ಜಾಥಾ ಏರ್ಪಡಿಸುವುದು ಹಾಗೂ ಘೋಷಣೆಗಳನ್ನು ಕೂಗುವ ಮೂಲಕ ಹೆಚ್ಚಿನ ಪ್ರಚಾರ ಒದಗಿಸಬೇಕು  ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ  ತಿಳಿಸಿದ್ದಾರೆ.  

23 Feb 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top