PLEASE LOGIN TO KANNADANET.COM FOR REGULAR NEWS-UPDATES


 ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹೊಸಪೇಟೆ ಆಕಾಶವಾಣಿ ಕೇಂದ್ರದವರ ಸಹಕಾರದೊಂದಿಗೆ ಏ. ೦೧ ರಂದು ಮಧ್ಯಾಹ್ನ ೧೨ ಗಂಟೆಗೆ ಹೊಸಪೇಟೆ ಆಕಾಶವಾಣಿ ಕೇಂದ್ರದಿಂದ ನೇರ ಫೋನ್-ಇನ್ ಕಾರ್ಯಕ್ರಮ ಪ್ರಸಾರವಾಗಲಿದೆ.
  ಮತದಾರರ ನೋಂದಣಿ ಹಾಗೂ ಮತದಾನ ಚಲಾವಣೆ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ನಿವಾರಿಸಲು ಭಾರತದ ಚುನಾವಣಾ ಆಯೋಗವು ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮ (ಸ್ವೀಪ್) ಜಾರಿಗೆ ತಂದಿದ್ದು, ಈ ಕಾರ್ಯಕ್ರಮದಡಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು   ಮತದಾರರ ಹಾಗೂ ಕೇಳುಗರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.  ಸ್ವೀಪ್ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ನೇರ ಫೋನ್-ಇನ್ ಕಾರ್ಯಕ್ರಮವು ಏ. ೦೧ ರಂದು ಮಧ್ಯಾಹ್ನ ೧೨ ಗಂಟೆಯಿಂದ ೦೧ ಗಂಟೆಯವರೆಗೆ ಹೊಸಪೇಟೆ ಆಕಾಶವಾಣಿ ಕೇಂದ್ರದ ಎಫ್.ಎಂ. ಬ್ಯಾಂಡ್ ಕಂಪನಾಂಕ ೧೦೦. ೫ ಮೆಗಾಹರ್ಟ್ಸ್‌ನಲ್ಲಿ ಪ್ರಸಾರವಾಗಲಿದ್ದು, ಕೇಳುಗರು ದೂರವಾಣಿ ಸಂಖ್ಯೆ ೦೮೩೯೪-೨೨೧೧೦೦ ಅಥವಾ ೦೮೩೯೪-೨೨೭೧೦೦ ಕ್ಕೆ ಸಂಪರ್ಕಿಸಿ ಮಾಹಿತಿ ಅಥವಾ ಪ್ರಶ್ನೆಗಳನ್ನು ಕೇಳಬಹುದಾಗಿದೆ .
27 Mar 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top