ಕೊಪ್ಪಳ. ಕ್ಷೇತ್ರದ ತುಂಬೆಲ್ಲ ಕಾಂಗ್ರೆಸ್ ಅಲೆಯ ಅಬ್ಬರವಿದ್ದು, ಮತದಾರರು ಕಾಂಗ್ರೆಸ್‌ನ್ನು ಗೆಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಸೋಮವಾರ ಸಂಜೆ ನಗರದ ೧೧ನೇ ವಾರ್ಡಿನ ಅಂಬೇಡ್ಕರ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾಂಗೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹಿಂದಿನ ಆಡಳಿತ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳಿಂದ ಬೇಸತ್ತಿರುವ ರಾಜ್ಯದ ಜನತೆ ಇದೀಗ ಜನಪರ ಸರಕಾರವನ್ನು ಅಧಿಕಾರಕ್ಕೆ ತರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದ ಅವರು, ಜನಪರ ಆಡಳಿತ ನೀಡುವ ಮೂಲಕ ದೇಶವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಸಾಮರ್ಥ್ಯವಿರುವ ಕಾಂಗ್ರೆಸ್‌ನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಹಾಗೂ ಭ್ರಷ್ಠಾಚಾರ, ಜನವಿರೋಧಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಮತದಾರರು ನಿಶ್ಚಯಿಸಿರುವುದರಿಂದ ಸಹಜವಾಗಿಯೇ ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವೇದಿಕೆ ಮೇಲೆ ಕಾಂಗ್ರೆಸ್ ಮುಖಂಡರಾದ ಎಚ್.ಎಲ್.ಹಿರೇಗೌಡ್ರು, ಈಶಪ್ಪ ಮಾದಿನೂರ, ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್, ಮಹೇಶ ಬಜಂತ್ರಿ, ಮುತ್ತು ಕುಷ್ಟಗಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ, ನಗರಸಭೆ ಮಾಜಿ ಸದಸ್ಯರಾದ ಕಾಟನ್ ಪಾಷಾ, ಮಾನ್ವಿ ಪಾಷಾ, ಶಕುಂತಲಾ ಹುಡೆಜಾಲಿ, ಎ.ವಿ.ಕಣವಿ, ಗವಿಸಿದ್ದಪ್ಪ ಮುದಗಲ್ ಮತ್ತಿತರರು ಉಪಸ್ಥಿತರಿದ್ದರು.
0 comments:
Post a Comment
Click to see the code!
To insert emoticon you must added at least one space before the code.