PLEASE LOGIN TO KANNADANET.COM FOR REGULAR NEWS-UPDATES

 : ಮಹಾತ್ಮಾಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕೇಳುವ ಕೂಲಿಕಾರರಿಗೆ ತಕ್ಷಣ ಕೆಲಸ ನೀಡುವಂತೆ ಎಲ್ಲ ಗ್ರಾಮ ಪಂಚಾಯತಿ ಪಿಡಿಓ/ಕಾರ್ಯದರ್ಶಿಗಳಿಗೆ ಆದೇಶ ನೀಡಲಾಗಿದೆ ಎಂದು ಕೊಪ್ಪಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
  ಉದ್ಯೋಗಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ೨೦೧೩-೧೪ನೇ ಸಾಲಿನ ಗ್ರಾಮ ಪಂಚಾಯತಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.  ಅದರನ್ವಯ ಕೊಪ್ಪಳ ತಾಲೂಕಿನ ಎಲ್ಲ ೩೫ ಗ್ರಾಮ ಪಂಚಾಯತಿಗಳ ಪಿಡಿಓ/ಕಾರ್ಯದರ್ಶಿಗಳು ತಕ್ಷಣದಿಂದಲೇ ಕಾಮಗಾರಿಗಳನ್ನು ಪ್ರಾರಂಭಿಸಿ, ಉದ್ಯೋಗಕ್ಕಾಗಿ ನೋಂದಾಯಿಸಿಕೊಂಡಿರುವ ಕೂಲಿಕಾರರಿಂದ ನಮೂನೆ-೬ ರಲ್ಲಿ ಬೇಡಿಕೆ ಅರ್ಜಿಯನ್ನು ಪಡೆದುಕೊಂಡು ಕಾರ್ಯ ಪ್ರವೃತ್ತರಾಗಬೇಕು.  ಕ್ರಿಯಾ ಯೋಜನೆಯಂತೆ ಕಾಮಗಾರಿಗಳನ್ನು ಪ್ರಾರಂಭಿಸಿ, ಉದ್ಯೋಗ ಬಯಸುವವರಿಗೆ ಸ್ಥಳೀಯವಾಗಿ ಕೂಲಿ ಕೆಲಸ ಒದಗಿಸುವ ಮೂಲಕ ಗುಳೇ ಹೋಗುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಬೇಡಿಕೆಗೆ ತಕ್ಕಂತೆ ಉದ್ಯೋಗ ಒದಗಿಸಲು ವಿಫಲರಾಗುವ ಪಿಡಿಓ/ಕಾರ್ಯದರ್ಶಿಗಳನ್ನೇ ಹೊಣೆಗಾರರನ್ನಾಗಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ಎಚ್ಚರಿಕೆ ನೀಡಿದ್ದಾರೆ.

31 May 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top