PLEASE LOGIN TO KANNADANET.COM FOR REGULAR NEWS-UPDATES

  ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅವಶ್ಯಕವಾಗಿದ್ದು, ಈ ಕಾನೂನು ಅರಿವು-ನೆರವು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದಲ್ಲಿ ಯಶಸ್ಸು ಕಾಣಬೇಕೆಂ


ದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ.ಬಬಲಾದಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಪ್ರಥಮ ದರ್ಜೆ ಕಾಲೇಜ್ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ವಿಶೇಷ ಕಾನೂನು ಅರಿವು ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. 
ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಾಗಿ ಬಡತನದ ಕಾರಣದಿಂದ ಮಕ್ಕಳನ್ನು ಶಾಲೆಗೆ ಸೇರಿಸದೆ, ಅನಿಷ್ಠ ಬಾಲಕಾರ್ಮಿಕ ಪದ್ಧತಿಗೆ ದೂಡುತ್ತಿರುವುದು ಕಂಡುಬರುತ್ತಿದೆ. ಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯ ಉಜ್ವಲಗೊಳಿಸಲು ಸಾಧ್ಯವಾಗುತ್ತದೆ.  ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಅರಿವು ಹೊಂದಿದಲ್ಲಿ, ಅವರ ಭವಿಷ್ಯದ ಜೀವನವನ್ನು ನೆಮ್ಮದಿಯಾಗಿ ನಡೆಸಲು ಸಾಧ್ಯವಾಗಲಿದೆ.  ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ಪಡೆದುಕೊಳ್ಳಬೇಕು. ವಿದ್ಯೆ ಕಲಿಸಿದ ಗುರು, ತಂದೆ, ತಾಯಿಯರ ಪಾಲನೆ ಪಡೆದುಕೊಂಡು ಜೀವನದಲ್ಲಿ ಉನ್ನತ ಪ್ರಜೆಯಾಗಿ ಮುಂದುವರೆದು ಜಿಲ್ಲೆಗೆ, ಕಲಿತ ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ.ಬಬಲಾದಿ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ತಿಮ್ಮಾರೆಡ್ಡಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿನೀಯರ್ ಸಿವಿಲ್ ಜಡ್ಜ್ ಬಸವರಾಜ ಶೆಂ.ಚೇಗರಡ್ಡಿ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ ಅವರು   ಮಾತನಾಡಿ, ಕಾನೂನು ತಿಳುವಳಿಕೆ ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.  
 ಇದೇ ಸಂದರ್ಭದಲ್ಲಿ ವಕೀಲರಾದ ಹನುಮಂತರಾವ್ ಅವರು ಪ್ರತಿಕೂಲದಿಂದ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ ಪೀಡಿಸುವುದು (ರ್‍ಯಾಗಿಂಗ್) ಕುರಿತು, ಶಶಿಕಾಂತ ಕಲಾಲ ಅವರು ಮಕ್ಕಳ ರಕ್ಷಣೆಯಲ್ಲಿ ಶಿಕ್ಷಕರ ಮತ್ತು ಪಾಲಕರ ಕರ್ತವ್ಯಗಳು ಕುರಿತು ಹಾಗೂ ನೇತ್ರಾ ಬಿ.ಪಾಟೀಲ್ ಅವರು ಮಕ್ಕಳ ಹಕ್ಕು ಮತ್ತು ರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಉಪನ್ಯಾಸಕಿ ಗಾಯತ್ರಿ ಭಾವಿಕಟ್ಟಿ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕ ಪ್ರಭುರಾಜ ಅವರು ನಿರೂಪಿಸಿ ಕೊನೆಯಲ್ಲಿ ವಂದಿಸಿದರು. 



24 Jul 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top