ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಗೂ ಮುನ್ನಾ ದಿನಗಳಂದು ಜಿಲ್ಲೆಯಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡದಂತೆ ಹಾಗೂ ಬಳಸದಂತೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರುವ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜದ ಬಳಕೆ ಎಲ್ಲಿಯೂ ಆಗಬಾರದು. ಇದಕ್ಕಾಗಿ ಯಾವುದೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟವಾಗಬಾರದು, ಮತ್ತು ಯಾವುದೇ ಸಾರ್ವಜನಿಕರು ಮತ್ತು ಮಕ್ಕಳು ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು. ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ ೬ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಗರದ ಸಾರ್ವಜನಿಕ ಮೈದಾನದಲ್ಲಿ ಏರ್ಪಡಿಸಲಾಗುವುದು ಎಂದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅನುಕೂಲವಾಗುವಂತೆ ಸಹಾಯಕ ಆಯುಕ್ತ ಮಂಜುನಾಥ್ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ರವಿ ಬಸರಿಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಮುಸಿಯಪ್ಪ ಅವರ ನೇತೃತ್ವದ ಸ್ತಬ್ಧಚಿತ್ರ ಸಮಿತಿ ರಚಿಸಲಾಯಿತು. ಪಥ ಸಂಚಲನದಲ್ಲಿ ಶಿಸ್ತುಬದ್ಧ ಕವಾಯತು ನಡೆಸಲು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.
0 comments:
Post a Comment
Click to see the code!
To insert emoticon you must added at least one space before the code.