ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ/ಕಾಲೇಜು ತರಗತಿಗಳಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು ಮಾಡಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ www.sw.kar.nic.in ನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಥವಾ ಆಯಾ ತಾಲೂಕ ಸಮಾಜ ಕಲ್ಯಾಣ ಅಧಿಕಾರಿಯವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಬಿ.ಕಲ್ಲೇಶ ಅವರು ತಿಳಿಸಿದ್ದಾರೆ.
ವಿವಿಧ ಕೋರ್ಸುಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾವಂತ ಅಭ್ಯರ್ಥಿಗಳಿಗೆ ಜಿ.ಎನ್.ಎಂ. ಮತ್ತು ಬಿಎಸ್ಸಿ. ನರ್ಸಿಂಗ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.೧೫ ಕೊನೆಯ ದಿನವಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾ/ತಾಲೂಕು ಸಮಾಜ ಕಲ್ಯಾಣ ಅಧಿಕಾರಿಯವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಅಥವಾ ಇಲಾಖೆಯ ವೆಬ್ ಸೈಟ್ www.sw.kar.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಬಿ.ಕಲ್ಲೇಶ ಅವರು ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.