ಯಲಬುರ್ಗಾ ತಾಲೂಕು ಕುದರಿಮೋತಿ ಗ್ರಾಮದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಮಂಜೂರಾಗಿರುವ ನೂತನ ಪ್ರೌಢಶಾಲಾ ಕಟ್ಟಡದ ಶಂಕುಸ್ಥಾಪನೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಮಾತನಾಡಿ, ಕುದರಿಮೋತಿಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಮಂಜೂರಾದ ನೂತನ ಶಾಲಾ ಕಟ್ಟಡದಲ್ಲಿ ೬೦ ಲಕ್ಷ ರೂ. ವೆಚ್ಚದಲ್ಲಿ ಒಟ್ಟು ೧೦ ಕೊಠಡಿಗಳನ್ನು ನಿರ್ಮಿಸಲಾಗಿದೆ. ಈ ಉನ್ನತೀಕರಿಸಿದ ಶಾಲೆ ಮುಂದಿನ ದಿನಗಳಲ್ಲಿ ಪಿಯುಸಿ ವರೆಗೂ ವಿಸ್ತರಣೆಗೊಳ್ಳಲಿದೆ. ಕುದರಿಮೋತಿ ಗ್ರಾಮಕ್ಕೆ ಸಧ್ಯದಲ್ಲೆ ಮೊರಾರ್ಜಿ ಶಾಲೆ ಮಂಜೂರಾಗಲಿದೆ. ಯಲಬುರ್ಗಾ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ, ನೀರಾವರಿ ಮತ್ತು ರೈಲ್ವೆ ಯೋಜನೆಗಳ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದ್ದು, ೧. ೨೭ ಲಕ್ಷ ಎಕರೆ ಪ್ರದೇಶವನ್ನು ನೀರಾವರಿಗೆ ಒಳಪಡಿಸುವ ಗುರಿಯನ್ನು ಹೊಂದಿದ್ದೇನೆ. ಬಹಳಷ್ಟು ಅಭಿವೃದ್ಧಿ ಯೋಜನೆಗಳು ಯಲಬುರ್ಗಾ ತಾಲೂಕಿಗೆ ಮಂಜೂರಾತಿ ಮಾಡಿಸಲಾಗುತ್ತಿದೆಯಾದರೂ, ನಿವೇಶನ ದೊರೆಯದ ಕಾರಣ ಅನುಷ್ಠಾನ ಆಗುವುದರಲ್ಲಿ ತೊಂದರೆ ಉಂಟಾಗುತ್ತಿದೆ. ಸಾರ್ವಜನಿಕರು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ, ಜಿ.ಪಂ. ಸದಸ್ಯರುಗಳಾದ ಅಶೋಕ್ ತೋಟದ, ರಾಮಣ್ಣ ಸಾಲಭಾವಿ, ತಾ.ಪಂ. ಅಧ್ಯಕ್ಷೆ ಲಕ್ಷ್ಮವ್ವ ರಾಠೋಡ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಗಣ್ಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment
Click to see the code!
To insert emoticon you must added at least one space before the code.