ಅಣ್ಣಿಗೇರಿ : ಟವೇರಾ ವಾಹನ ಮತ್ತು ಸರಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.
ಮೃತರನ್ನು ಕೊಪ್ಪಳದ ದಿಡ್ಡಿಕೇರಿ ಬಡಾವಣೆಯ ನಿವಾಸಿಗಳಾದ ಮುಹಮ್ಮದ್(30), ಅಸ್ಲಾಂ(38), ಶರ್ದುಲ್ಲಾ(28), ಜರೀನಾ(30) ಹಾಗೂ10 ಬಾಲಕ ಎಂದು ಗುರುತಿಸಲಾಗಿದೆ. ಇವರು ಟವೇರಾ ವಾಹನದಲ್ಲಿ ಗೋವಾದಿಂದ ಕೊಪ್ಪಳಕ್ಕೆ ತೆರಳುತ್ತಿದ್ದಾಗ ನವಲಗುಂದ ತಾಲೂಕಿನ ಅಣ್ಣಿಗೇರಿ ಬಳಿ ಇಂದು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
0 comments:
Post a Comment
Click to see the code!
To insert emoticon you must added at least one space before the code.