PLEASE LOGIN TO KANNADANET.COM FOR REGULAR NEWS-UPDATES

 ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೨ನೇ ಸಾಲಿಗೆ ಯುವ ಬರಹಗಾರರು ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಸಾಹಿತ್ಯದ ಪ್ರಕಾರಗಳಿಗೆ ಪ್ರೋತ್ಸಾಹಧನ ನೀಡಲು ಅರ್ಹ ಯುವ ಬರಹಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ೧೮ ರಿಂದ ೩೫ ವರ್ಷದವರಾಗಿರಬೇಕು, ವಯಸ್ಸಿನ ದಾಖಲಾತಿ ಬಗ್ಗೆ ಎಸ್‌ಎಸ್‌ಎಲ್‌ಸಿ ಅಥವಾ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದೊಂದಿಗೆ, ಇದುವರೆಗೂ ಎಲ್ಲಿಯೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರದೊಂದಿಗೆ, ತಾವು ರಚಿಸಿರುವ ಚೊಚ್ಚಲ ಕೃತಿಯನ್ನು ಬೆರಳಚ್ಚು/ಡಿಟಿಪಿ ಮಾಡಿಸಿ, ತಮ್ಮ ಸ್ವ-ವಿವರಗಳೊಂದಿಗೆ ಅರ್ಜಿಗಳನ್ನು ನ.೨೨ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಕಳುಹಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ ೧/೮ ಡೆಮ್ಮಿ ಅಳತೆಯಲ್ಲಿ ಕನಿಷ್ಠ ೩೨ ಪುಟಗಳಿರಬೇಕು. 
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ ಬೆಂಗಳೂರ ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬-೨೨೦೧೭೭೦೪ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

24 Oct 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top