ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕೊಪ್ಪಳ, ಗಂಗಾವತಿ ಹಾಗೂ ಮಹಾಲಕ್ಷ್ಮೀ ಕಲಾ ಸಂಘ ಕೇಸರಹಟ್ಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅ.೨೬ ರಂದು ಬೆಳಿಗ್ಗೆ ೧೦.೩೦ ಕ್ಕೆ ಗಂಗಾವತಿಯ ಎಮ್.ಎನ್.ಎಮ್. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಸುರೇಶ, ನಗರಸಭೆ ಅಧ್ಯಕ್ಷ ಶ್ಯಾಮೀದ್ ಮನಿಯಾರ್, ಎಪಿಎಂಸಿ ಅಧ್ಯಕ್ಷ ಗಂಗಾಧರಯ್ಯಸ್ವಾಮಿ ಕಲ್ಲಬಾಗಿಲಮಠ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ, ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೈ.ಸುದರ್ಶನರಾವ್ ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.