PLEASE LOGIN TO KANNADANET.COM FOR REGULAR NEWS-UPDATES

ದಿನಾಂಕ ೨೩-೧೦-೨೦೧೩ ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೊಪ್ಪಳ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ ಹಾಗೂ ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ-೨೦೧೩ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ೮.೩೦ ಘಂಟೆಗೆ ಹಳೆಯ ಜಿಲ್ಲಾ ಆಸ್ಪತ್ರೆ ಆವರಣ ಕೊಪ್ಪಳದಲ್ಲಿ ಜಾಥಾ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಮಹದೇವಸ್ವಾಮಿ ಇವರು ಹಸಿರು ಭಾವುಟದ ಮೂಲಕ ಜಾಥಾ ಕಾರ್ಯಕ್ರಮವನ್ನು ಚಾಲನೆ ಮಾಡಿದರು. 
ನಂತರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರದಲ್ಲಿ ಡಾ|| ಮಹದೇವಸ್ವಾಮಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೊಪ್ಪಳ, ಡಾ|| ಎಸ್.ಕೆ. ದೇಸಾಯಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಕೊಪ್ಪಳ, ಡಾ|| ಗುರುಮೂರ್ತಿ ವೈದ್ಯಾಧಿಕಾರಿಗಳು ಗೋಪಿ ಬ್ಲಡ್‌ಬ್ಯಾಂಕ್ ಗಂಗಾವತಿ, ಪ್ರೊ. ತಿಮ್ಮಾರೆಡ್ಡಿ ಮೇಟಿ ಪ್ರಾಂಶುಪಾಲರು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ,   ಪ್ರಭುರಾಜ ನಾಯಕ್, ಉಪನ್ಯಾಸಕರು & ಎನ್.ಎಸ್.ಎಸ್. ಅಧಿಕಾರಿಗಳು, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ, ಡಾ|| ಸಿದ್ದಲಿಂಗಪ್ಪ ಕೊಟ್ನೇಕಲ್, ಉಪನ್ಯಾಸಕರು & ಎನ್.ಎಸ್.ಎಸ್. ಅಧಿಕಾರಿಗಳು  ಗವಿಸಿದ್ಧೇಶ್ವರ ಪದವಿ ಪೂ


ರ್ವ ಕಾಲೇಜು ಕೊಪ್ಪಳ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಗವಿಸಿದ್ದೇಶ್ವರ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಹಾಗೂ ಸಂರಕ್ಷ, ಚೈತನ್ಯ, ಉಜ್ವಲ, ಹೊಂಗಿರಣ, ಸ್ನೇಹ ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿ ಹಾಗೂ ಡ್ಯಾಪ್ಕು ಸಿಬ್ಬಂದಿ ಸಹ ಹಾಜರಿದ್ದರು. ಸದರಿ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ೫ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

23 Oct 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top