PLEASE LOGIN TO KANNADANET.COM FOR REGULAR NEWS-UPDATES

 : ವಿದ್ಯಾರ್ಹತೆಯಲ್ಲಿ ಸಡಿಲಿಕೆ
ಕೊಪ್ಪಳ,  ನವೆಂಬರ್ ೨೬   : ವಾರ್ತಾ ಇಲಾಖೆಯ ಗಿರಿಜನ ಉಪಯೋಜನೆಯಡಿ ೨೦೧೩-೧೪ನೇ ಸಾಲಿನಲ್ಲಿ ಪತ್ರಿಕೋದ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು  ಲ್ಯಾಪ್‌ಟಾಪ್ ಹಾಗೂ ಡಿಜಿಟಲ್ ಕ್ಯಾಮೆರಾ ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ವಿದ್ಯಾರ್ಹತೆ ನಿಯಮಗಳಲ್ಲಿ ಸಡಿಲಿಕೆ ತರಲಾಗಿದ್ದು, ರಾಜ್ಯದಲ್ಲಿ ಪ್ರಸ್ತುತ ಪೂರ್ಣಾವಧಿ ಪದವಿ (ಬಿ.ಎ. ಪತ್ರಿಕೋದ್ಯಮ/ಸಮೂಹ ಸಂವಹನ/ ವಿದ್ಯುನ್ಮಾನ ಮಾಧ್ಯಮ ಅಧ್ಯಯನ ವಿಷಯದಲ್ಲಿ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಷ) ಹಾಗೂ ಸ್ನಾತಕೋತ್ತರ ಪದವಿ (ಎಂ.ಎ. ಪ್ರಥಮ ಹಾಗೂ ಅಂತಿಮ ವರ್ಷ)ಗಳಲ್ಲಿ ಪತ್ರಿಕೋದ್ಯಮ/ ಸಮೂಹ ಸಂವಹನ/ ವಿದ್ಯುನ್ಮಾನ ಮಾಧ್ಯಮ ಅಧ್ಯಯನ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಈ ಯೋಜನೆಯ   ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 
ಪ್ರಸ್ತುತ ಪತ್ರಿಕೋದ್ಯಮ ಐಚ್ಛಿಕ ವಿಷಯವನ್ನಾಗಿ ನೀಡುವ ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ಪ್ರಾಚಾರ್ಯರು ಹಾಗೂ ಎಲ್ಲ ವಿಶ್ವವಿದ್ಯಾನಿಲಯಗಳ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಮೇಲೆ ತಿಳಿಸಿರುವಂತೆ ತಮ್ಮ ಕಾಲೇಜಿನ / ವಿಭಾಗದ ಪರಿಶಿಷ್ಟ  ಪಂಗಡಕ್ಕೆ ಸೇರಿದ ಎಲ್ಲ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪಟ್ಟಿಯನ್ನು ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾ ಸೌಧ, ಸಂ.೧೭, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು- ೫೬೦೦೦೧,  ಕಚೇರಿಗೆ ಹಾಗೂ ಇ-ಮೇಲ್ ವಿಳಾಸ scptspinformation@gmail.com  ಕ್ಕೆ ನ. ೩೦ ರ ಒಳಗಾಗಿ ಸಲ್ಲಿಸಲು ಕೋರಿದೆ. 
ಪಟ್ಟಿಯಲ್ಲಿ, ವಿದ್ಯಾರ್ಥಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವ್ಯಾಸಂಗ ಮಾಡುತ್ತಿರುವ ಪದವಿ ಹಾಗೂ ತರಗತಿ, ಜಾತಿ ಹಾಗೂ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡವಾರು ಅಂಕಗಳ ವಿವರಗಳನ್ನು ನೀಡಬೇಕು. ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 

26 Nov 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top