ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಡಿಸೆಂಬರ್ ೦೬ ರವರೆಗೆ ವಿಸ್ತರಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಡಿ ೧ನೇ ಜನವರಿ ೨೦೧೪ ದಿನವನ್ನು ಅರ್ಹತಾ ದಿನಾಂಕವನ್ನಾಗಿಸಿ, ೧೮ ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವುದು, ಕರಡು ಮತದಾರರ ಪಟ್ಟಿಗೆ ಕ್ಲೇಮುಗಳು ಮತ್ತು ಆಕ್ಷೇಪಣೆ ಸಲ್ಲಿಸಲು ಈ ಮೊದಲು ನ. ೨೯ ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಇದೀಗ ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಡಿ. ೦೬ ರವರೆಗೆ ಅವಧಿಯನ್ನು ವಿಸ್ತರಿಸಿದೆ ಎಂದು ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಚುನಾವಣೆಗಳು) ಪದನಿಮಿತ್ತ ಸರ್ಕಾರದ ಉಪಕಾರ್ಯದರ್ಶಿ ಹಾಗೂ ಉಪ ಮುಖ್ಯ ಚುನಾವಣಾಧಿಕಾರಿಯಾಗಿರುವ ಪಿ.ಟಿ. ಕುಲಕರ್ಣಿ ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.