ಕೊಪ್ಪಳ ಜಿಲ್ಲೆಗೆ ಸಂಬಂಧಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಂಬಂಧ ಮುನಿರಾಬಾದ್‌ನ ಇಂದ್ರಭವನ ಅತಿಥಿ ಗೃಹದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಗೆ ಅರ್ಹರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಡಿ. ೦೬ ರವರೆಗೆ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹರು ಮತದಾರರ ಪಟ್ಟಿಗೆ ಹೆಸರು ಸೇರಿಸುವ ಕುರಿತಂತೆ ವ್ಯಾಪಕ ಪ್ರಚಾರವನ್ನು ಕೈಗೊಳ್ಳಬೇಕು. ಈಗಾಗಲೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿನ ಮತದಾರರ ಪಟ್ಟಿ ಮತ್ತು ಜನಸಂಖ್ಯೆಗೆ ಇರುವ ಅನುಪಾತ ೬೪ ಆಗಿದೆ. ಅಲ್ಲದೆ ಮಹಿಳಾ ಮತದಾರರ ಅನುಪಾತವೂ ಸಹ ೯೮೧ ಆಗಿದೆ. ರಾಜ್ಯದ ಅನುಪಾತದ ಅಂಕಿ ಅಂಶಗಳಿಗೆ ಹೋಲಿಸಿದಾಗ ಅಂತಹ ಗಣನೀಯ ವ್ಯತ್ಯಾಸ ಇಲ್ಲದಿರುವುದರಿಂದ, ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ತೃಪ್ತಿಕರವಾಗಿದೆ. ರಾಜಕೀಯ ಪಕ್ಷಗಳು ಕೂಡಲೆ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಿಸಿ, ಅಂತಹವರ ಪಟ್ಟಿಯನ್ನು ಸಲ್ಲಿಸಬೇಕು. ಒಟ್ಟಾರೆಯಾಗಿ ದೋಷಮುಕ್ತ ಮತದಾರರ ಪಟ್ಟಿ ತಯಾರಿಕೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ರಮಕ್ಕೆ ರಾಜಕೀಯ ಪಕ್ಷಗಳು ಉತ್ತಮ ಸಹಕಾರ ನೀಡಬೇಕು ಎಂದು ಗುಲಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ಹೇಳಿದರು.
ಸಹಾಯಕ ಆಯುಕ್ತ ಮಂಜುನಾಥ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಸಮಗ್ರ ವಿವರಗಳನ್ನು ಈ ಸಂದರ್ಭದಲ್ಲಿ ವಿವರಿಸಿದರು. ಸಭೆಯಲ್ಲಿ ರಾಜಕೀಯ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಉಳಿದಂತೆ ಜಿಲ್ಲೆಯ ಎಲ್ಲ ತಹಸಿಲ್ದಾರರು ಭಾಗವಹಿಸಿದ್ದರು.
0 comments:
Post a Comment
Click to see the code!
To insert emoticon you must added at least one space before the code.