: ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ತಲೆ ಮೇಲೆ ಮಲ ಹೊರುವ ಅನಿಷ್ಠ ಪದ್ದತಿಯನ್ನು ನಿಷೇಧಿಸಲಾಗಿದ್ದು, ಯಾವುದೇ ಶೌಚಾಲಯದ ಗುಂಡಿಗಳನ್ನು ಸಕ್ಕಿಂಗ್ ಯಂತ್ರದ ಮೂಲಕವೇ ಸ್ವಚ್ಛಪಡಿಸಿಕೊಳ್ಳಬೇಕು ಎಂದು ಗಂಗಾವತಿ ನಗರಸಭೆ ಪೌರಾಯುಕ್ತರು ಸೂಚನೆ ನೀಡಿದ್ದಾರೆ.
ತಲೆ ಮೇಲೆ ಮಲ ಹೊರುವ ಪದ್ಧತಿಯನ್ನು ಈಗಾಗಲೆ ನಿಷೇಧಿಸಲಾಗಿದ್ದು, ನ್ಯಾಯಾಲಯ ಮತ್ತು ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಂಪ್ಲಾಯ್ಮೆಂಟ್ ಆಫ್ ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ಅಂಡ್ ಕನ್‌ಸ್ಟ್ರಕ್ಷನ್ ಆಫ್ ಡ್ರೈ ಲ್ಯಾಟ್ರಿನ್ (ಪ್ರಾಹಿಬಿಷನ್) ಆಕ್ಟ್ ೧೯೯೩ ರ ರೀತ್ಯ ಮ್ಯಾನುವೆಲ್ ಸ್ಕ್ಯಾವೆಂಜಿಂಗ್ ಆಚರಣೆಗೆ ಕಾರಣರಾದವರನ್ನು ಮತ್ತು ಈ ಪದ್ದತಿಯನ್ನು ಮಾಡುತ್ತಿರುವವರು ಅಪರಾಧಿಗಳಾಗಿರುತ್ತಾರೆ. ಈ ನಿಯಮದನ್ವಯ ಒಣ ಶೌಚಾಲಯಗಳನ್ನು ಹೊಂದುವುದಾಗಲಿ, ತಲೆ ಮೇಲೆ ಮಲ ಹೊರುವುದಾಗಲಿ ಹಾಗೂ ಮಲ ಹೊರುವ ಪದ್ದತಿಗೆ ಪ್ರಚೋದನೆ ನೀಡುವುದನ್ನು ಸಹ ನಿಷೇಧಿಸಲಾಗಿದ್ದು, ಇನ್ನು ಮುಂದೆ ಶೌಚಾಲಯದ ಗುಂಡಿಗಳನ್ನು ಯಾವುದೇ ವ್ಯಕ್ತಿಗಳು ಸ್ವಚ್ಚ ಮಾಡದೇ ಸೆಕ್ಕಿಂಗ್ ಯಂತ್ರದ ಮೂಲಕವೇ ಸ್ವಚ್ಚಗೊಳಿಸಬೇಕು. ತಪ್ಪಿದಲ್ಲಿ ಕಾನೂನು ರೀತ್ಯ ನಿರ್ಧಾಕ್ಷ್ಯಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗಂಗಾವತಿ ನಗರಸಭೆ ಪೌರಾಯುಕ್ತರು ಎಚ್ಚರಿಕೆ ನೀಡಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.