PLEASE LOGIN TO KANNADANET.COM FOR REGULAR NEWS-UPDATES

 ಮತದಾರರಲ್ಲಿ ಕಡ್ಡಾಯ ಮತದಾನದ ಪ್ರಜ್ಞೆಯನ್ನು ಜಾಗೃತಗೊಳಿಸಲು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಶನಿವಾರ ನಗರದಲ್ಲಿ ವಿದ್ಯಾರ್ಥಿಗಳ ಬೃಹತ್ ಜಾಥಾ ನಡೆಸಲಾಯಿತು.
  ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸೋಮಲಾಪುರ ಅವರು ಪಾರಿವಾಳವನ್ನು ಹಾರಿಬಿಡುವ ಮೂಲಕ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  ಇದಕ್ಕೂ ಪೂರ್ವದಲ್ಲಿ ವಿದ್ಯಾರ್ಥಿಗಳು, ಸಂಸ್ಥೆಯ ಪ್ರಾಚಾರ್ಯರು ಮತ್ತು ಆಡಳಿತ ಮಂಡಳಿಯವರ ಸಹಯೋಗದೊಂದಿಗೆ ಎಲ್ಲರೂ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ, ನೈತಿಕವಾಗಿ ಕಡ್ಡಾಯ ಮತದಾನ ಮಾಡುತ್ತೇವೆ ಎಂಬುದಾಗಿ  ಪ್ರತಿಜ್ಞಾ ವಿಧಿ ಸ್ವೀಕರಿಸಿದರು.  ಮತದಾರರ ಜಾಗೃತಿಗಾಗಿ ಸಂಸ್ಥೆಯ ಬಿ.ಇಡಿ ಮತ್ತು ಡಿ.ಇಡಿ ವಿದ್ಯಾರ್ಥಿಗಳು ಬೃಹತ್ ಜಾಥಾವನ್ನು ನಗರದ ವಿವಿಧ ಪ್ರದೇಶಗಳಲ್ಲಿ ನಡೆಸಿ, ಹಲವು ಘೋಷಣೆಗಳನ್ನು ಹಾಕುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು.  ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ರಾಜಶೇಖರ ಬಿ. ಗಾಂಜಿ ಸೇರಿದಂತೆ ಸಂಸ್ಥೆಯ ಉಪನ್ಯಾಸಕ ವರ್ಗ, ಗುರು ಮಾತೆಯರು ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

  ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ವಿದ್ಯುನ್ಮಾನ ಮತಯಂತ್ರ ನಿರ್ವಹಣೆ ಕುರಿತಂತೆ ತರಬೇತಿಯನ್ನು ನಗರದ ಬಿ.ಎನ್.ಆರ್.ಕೆ. ಕಾಲೇಜಿನಲ್ಲಿ ನೀಡಲಾಯಿತು.
  ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಸಿಬ್ಬಂದಿಗಳಿಗೆ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳ ನೇಮಕ ಆದೇಶವನ್ನು ಸಹ ಇದೇ ಸಂದರ್ಭದಲ್ಲಿ ವಿತರಿಸಲಾಯಿತು.  ಅಧಿಕಾರಿ, ಸಿಬ್ಬಂದಿಗಳಿಗೆ ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಸ್ಟರ್ ಟ್ರೇನ
ರ್‌ಗಳು ತರಬೇತಿ ನೀಡಿದರು.
  ಕೊಪ್ಪಳದ ವಿಧಾನಸಭಾ ಸಹಾಯಕ ಚುನಾವಣಾಧಿಕಾರಿಯಾಗಿರುವ ಸಹಕಾರ ಸಂಘಗಳ ಉಪನಿಬಂಧಕ ಮುನಿಯಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

29 Mar 2014

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top