PLEASE LOGIN TO KANNADANET.COM FOR REGULAR NEWS-UPDATES

ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಕರೆದ ಮಹತ್ವದ ಸಭೆಗೆ ಗೈರು ಹಾಜರಾಗಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕರ್ತವ್ಯಲೋಪ ಎಸಗಿದ ಕೊಪ್ಪಳ ನಗರಸಭೆ ಪೌರಾಯುಕ್ತ ರುದ್ರಮುನಿ ಅವರಿಗೆ ನೋಟೀಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಂಕ್ರಪ್ಪ ಅವರಿಗೆ ಸೂಚನೆ ನೀಡಿದರು.
  ಸಭೆಯಲ್ಲಿ ಉಪಸ್ಥಿತರಿದ್ದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಗ್ರಾಮಿಣ ಪ್ರದೇಶಗಳಲ್ಲಿ ಈಗಾಗಲೆ ಕೊರೆಯಿಸಲಾಗಿರುವ ಹಲವಾರು ಬೋರ್‌ವೆಲ್‌ಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕ ಒದಗಿಸದೇ ಇರುವುದರಿಂದ, ನೀರಿನ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಆದ್ದರಿಂದ, ಅಂತಹ ಕೊಳವೆಬಾವಿಗಳಿಗೆ ಹ್ಯಾಂಡ್‌ಪಂಪ್ ಅಳವಡಿಸಿದಲ್ಲಿ, ಸಾರ್ವಜನಿಕರಿಗೆ ಅನುಕೂಲವಾಗಲಿದೆ.  ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಸ್ಪಂದಿಸಿ, ಅಂತಹ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.
  ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಪಂ.ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಇಸ್ಮಾಯಿಲ್ ಖಾನ್ ಸೇರಿದಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂ.ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ಗಳು, ನಗರಸಭೆ, ಪುರಸಭೆ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.
 

27 Apr 2014

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top