PLEASE LOGIN TO KANNADANET.COM FOR REGULAR NEWS-UPDATES


 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಇವರ ಆಶ್ರಯದಲ್ಲಿ ಜೂ.14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜಾಥಾವನ್ನು ಬೆಳಿಗ್ಗೆ 8.45 ಕ್ಕೆ ಹಮ್ಮಿಕೊಳ್ಳಲಾಗಿದ್ದು, ಅದೇ ದಿನದಂದು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ರಕ್ತದಾನದ ಮಹತ್ವ ಸಾರುವ ಜಾಥಾವು ಕೊಪ್ಪಳ ನಗರದ ಹಳೆ ಜಿಲ್ಲಾಸ್ಪತ್ರೆಯಿಂದ ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರ ಕಂಬ ಮೂಲಕ ಸಾಗಿ ಬರಲಿದೆ. ನಂತರ ಶ್ರೀ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಈ ಶಿಬಿರದಲ್ಲಿ ದಾನಿಗಳಿಂದ ರಕ್ತವನ್ನು ಸಂಗ್ರಹಿಸಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. 
ರಕ್ತದಾನ ಶ್ರೇಷ್ಠದಾನ : ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಿ
ಕೊಪ್ಪಳ ಜೂ.13 (ಕರ್ನಾಟಕ ವಾರ್ತೆ): ದಾನಗಳಲ್ಲಿ ಶ್ರೇಷ್ಠವಾದದ್ದು, ವಿದ್ಯಾದಾನ, ಅನ್ನದಾನ ಆದರೆ ಅದಕ್ಕಿಂತ ಶ್ರೇಷ್ಠವಾದುದು ರಕ್ತದಾನ.  ರಕ್ತದ ಅವಶ್ಯಕತೆ ಇದ್ದವರಿಗೆ ರಕ್ತವನ್ನು ದಾನವಾಗಿ ನೀಡುವುದು, ಆತನ ಜೀವ ಉಳಿಸಿದ ಕೃಪೆಗೆ ಪಾತ್ರನಾಗುತ್ತಾನೆಂದರೆ, ರಕ್ತದ ಮಹತ್ವ ಎಷ್ಟು ಎಂಬುದನ್ನು ಅರ್ಥೈಸಿಕೊಳ್ಳಬಹುದಾಗಿದೆ.  ಜೂ. 14 ರಂದು ವಿಶ್ವ ರಕ್ತದಾನಿಗಳ   ದಿನಾಚರಣೆ ಇದ್ದು, ಅಂದು ಬೆಳಿಗ್ಗೆ 10-30 ಗಂಟೆಗೆ ನಗರದ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ರಕ್ತದಾನ : ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು, ಸ್ವಯಂ ಪ್ರೇರಿತನಾಗಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ, ಕೊಡುವುದಕ್ಕೆ ರಕ್ತದಾನ ಎನ್ನುವರು. ಕೇವಲ ಮಾನವ ಮಾತ್ರ ಇನ್ನೊಬ್ಬ ಮಾನವನಿಗೆ ರಕ್ತ ನೀಡಲು ಸಾಧ್ಯ. ರಕ್ತಕ್ಕೆ ವರ್ಷವಿಡೀ ನಿರಂತರವಾಗಿ ಬೇಡಿಕೆ ಇರುತ್ತದೆ. ಯಾಕೆಂದರೆ ಅಪಘಾತಗಳು, ತುರ್ತು ಶಸ್ತ್ರ ಚಿಕಿತ್ಸೆಗಳ ಸಂದರ್ಭಗಳಲ್ಲಿ ಅಲ್ಲದೇ ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಮಹಿಳೆಯರು, ಥ್ಯಾಲಸೀಮಿಯಾ ಹಿಮೋಫೀಲಿಯಾ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ, ನಮ್ಮ ರಾಜ್ಯದಲ್ಲಿ ಒಂದು ದಿನಕ್ಕೆ 800 ರಿಂದ 1100 ಯುನಿಟ್‍ಗಳಷ್ಟು ರಕ್ತದ ಬೇಡಿಕೆ ಇದೆ, ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. 35 ದಿನಗಳ ನಂತರ, ಅದು ಉಪಯೋಗಕ್ಕೆ ಬರುವುದಿಲ್ಲ. 
ಯಾರು ರಕ್ತದಾನ ಮಾಡಬಹುದು ? : ಹೆಣ್ಣು ಗಂಡೆಂಬ ಭೇದವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು, ರಕ್ತದಾನಿಯ ದೇಹದ ತೂಕ 45 ಕೆ.ಜಿ.ಗಿಂತ ಹೆಚ್ಚಿರಬೇಕು, ಗಂಡಸರು 3 ತಿಂಗಳಿಗೆ ಒಮ್ಮೆ, ಹೆಂಗಸರು 4 ತಿಂಗಳಿಗೆ ಒಮ್ಮೆ ರಕ್ತದಾನ ಮಾಡಬಹುದು. ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕನಿಷ್ಠ 12.5 ಗ್ರಾಂ ಗಿಂತ ಹೆಚ್ಚಿರಬೇಕು.
ಯಾರು ರಕ್ತದಾನ ಮಾಡಬಾರದು ? : ಮಧ್ಯಪಾನ ಹಾಗೂ ಮಾದಕದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು, ಮಹಿಳೆಯರು, ತಿಂಗಳ ಮುಟ್ಟಿನ ಸಮಯದಲ್ಲಿ, ರಕ್ತದಾನ ಮಾಡಬಾರದು, ಗರ್ಭಪಾತವಾದ 8 ತಿಂಗಳು ರಕ್ತದಾನ ಮಾಡಬಾರದು, ಯಾವುದೇ ವ್ಯಕ್ತಿ ಕಾಯಿಲೆ ವಿರುದ್ದ ಲಸಿಕೆ ಪಡೆದಿದ್ದರೆ ಅಂತಹವರು ಲಸಿಕೆ ಪಡೆದ 4 ವಾರಗಳವರೆಗೆ ರಕ್ತದಾನ ಮಾಡಬಾರದು, ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 12 ತಿಂಗಳು ರಕ್ತದಾನ ಮಾಡಬಾರದು, ತೀವ್ರ ರಕ್ತದ ಒತ್ತಡ ಇರುವವರು ರಕ್ತದಾನ ಮಾಡಬಾರದು.
ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳು : ಹೃದಯಘಾತದ ಸಂಭವ ಕಡಿಮೆಯಾಗುವುದು, ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗುವುದು, ಇತರರು ಜೀವ ಉಳಿಸಿದಂತಾಗುವುದು, ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಉತ್ತೇಜಿಸುತ್ತದೆ, ದೇಹದಲ್ಲಿ ಹೊಸ ರಕ್ತ ಚಲನೆಯಿಂದ ಚುರುಕುತನ, ನೆನಪಿನ ಶಕ್ತಿ ಹೆಚ್ಚಾಗುತ್ತದೆ, ರಕ್ತದಾನ ಮಾಡುವುದರಿಂದ ಯಾವುದೇ ಕೆಟ್ಟ ಪರಿಣಾಮಗಳಾಗುವುದಿಲ್ಲ. ಬದಲಾಗಿ ಇದರಿಂದ ದೇಹಕ್ಕೆ ಅನುಕೂಲ ಪರಿಣಾಮಗಳಾಗುತ್ತವೆ. 
ರಕ್ತದಾನಿಗಳು  ತಮ್ಮ ಹೆಸರನ್ನು ನೋಂದಾಯಿಸಲು ಮಲ್ಲಿಕಾರ್ಜುನ ಡ್ಯಾಪ್ಕು ಕಛೇರಿ ಕೊಪ್ಪಳ ಮೊ.9632672278, ಎನ್‍ಎಸ್‍ಎಸ್ ಅಧಿಕಾರಿ ಡಾ.ಸಿದ್ದಲಿಂಗಯ್ಯ ಕೊಟ್ರೇಕಲ್ ಕೊಪ್ಪಳ ಮೊ.9448570340, ಸಿ.ಏಸ್.ಸಿ. ಸಂರಕ್ಷ ಪರಮೇಶ ಮೊ.9880248291, ಶ್ರೀ ಗವಿಸಿದ್ದೇಶ್ವ ಆಯುರ್ವೇದ ಮಹಾವಿದ್ಯಾಲಯದ ಶಿರೂರಮಠ ಮೊ.9845394735 ಇವರನ್ನು ಸಂಪರ್ಕಿಸಬಹುದಾಗಿದೆ .

Advertisement

0 comments:

Post a Comment

 
Top