PLEASE LOGIN TO KANNADANET.COM FOR REGULAR NEWS-UPDATES

 ಕನ್ನಡ ಪುಸ್ತಕ ಪ್ರಾಧಿಕಾರವು ಯುವ ಬರಹಗಾರರು ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ 2013ನೇ ಸಾಲಿನ ಪ್ರೋತ್ಸಾಹ ಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಿದೆ.
  ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ, ಲೇಖನ, ಪ್ರಬಂಧ ಮುಂತಾದ ಸಾಹಿತ್ಯದ ಪ್ರಕಾರಗಳಿಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟ್ರೀಯ ನಾಯಕರುಗಳ ಕುರಿತು ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ಅಥವಾ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ಪ್ರಸ್ತಾಪವಾಗಿರಬಾರದು.
ಅರ್ಜಿದಾರರು 18 ರಿಂದ 35 ವರ್ಷದವರಾಗಿರಬೇಕು, ವಯಸ್ಸಿನ ದಾಖಲಾತಿ ಬಗ್ಗೆ ಎಸ್‍ಎಸ್‍ಎಲ್‍ಸಿ ಅಥವಾ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದೊಂದಿಗೆ, ಇದುವರೆಗೂ ಎಲ್ಲಿಯೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರದೊಂದಿಗೆ, ಚೊಚ್ಚಲ ಕೃತಿಯನ್ನು ಬೆರಳಚ್ಚು/ಡಿ.ಟಿ.ಪಿ ಮಾಡಿಸಿ, ತಮ್ಮ ಸ್ವ-ವಿವರಗಳೊಂದಿಗೆ ಅರ್ಜಿಗಳನ್ನು ಜೂ.30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. 
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ದೂರವಾಣಿ ಸಂಖ್ಯೆ: 080-22484516/22017704 ಇವರನ್ನು ಸಂಪರ್ಕಿಸಬಹುದಾಗಿದೆ  

Advertisement

0 comments:

Post a Comment

 
Top