ಭಾರತ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಜನ-ಧನ ಯೋಜನೆ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಆ.೨೮ ರಂದು ಮಧ್ಯಾಹ್ನ ೩.೩೦ ಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಉಳಿತಾಯ ಖಾತೆ ಕಿಟ್ ವಿತರಣೆಯನ್ನು ಕೊಪ್ಪಳ ಸಂಸದ ಕರಡಿ ಸಂಗಣ್ಣ ಹಾಗೂ ಎಸ್.ಬಿ.ಹೆಚ್.ನ ಬಳ್ಳಾರಿ ಕ್ಷೇತ್ರಿಯ ಕಾರ್ಯಾಲಯದ ಸಹಾಯಕ ಮಹಾಪ್ರಭಂದಕ ಕೆ.ಎಸ್.ಎಸ್.ಟಿ. ವೆಂಕಟೇಶ್ವರರಾವ್ ಅವರು ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ ಕುಳಗಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರು, ತಾಲೂಕ ಪಂಚಾಯತಿ ಅಧ್ಯಕ್ಷೆ ವಿಶಾಲಾಕ್ಷಿ ವಿಜಯಕುಮಾರ ಮಾಲೀ ಪಾಟೀಲ್ ಅವರು ಪಾಲ್ಗೊಳ್ಳುವರು ಎಂದು ಎಸ್.ಬಿ.ಹೆಚ್.ನ ಜಿಲ್ಲಾ ಅಗ್ರಣೀಯ ಕಾರ್ಯಾಲಯದ ವ್ಯವಸ್ಥಾಪಕರಾದ ರವೀಂದ್ರ ಢಾಣಕಶಿರೂರ ಅವರು ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.