PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಗುಲಬರ್ಗಾ ವಿಭಾಗ ಮಟ್ಟದ ವಾಲಿಬಾಲ್, ಹ್ಯಾಂಡ್‍ಬಾಲ್, ಥ್ರೋ ಬಾಲ್ ದಸರಾ ಕ್ರೀಡಾಕೂಟ ಸೆ. 15 ರಿಂದ 16 ರವರೆಗೆ ಎರಡು ದಿನಗಳ ಕಾಲ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
  ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಸೆ. 15 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ನೆರವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಕ್ರೀಡಾ ಧ್ವಜಾರೋಹಣ ನೆರವೇರಿಸುವರು.  ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮ ವಿರುಪಾಕ್ಷಗೌಡ ಹೇರೂರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಶೋಕ್ ತೋಟದ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ವಿದ್ಯಾಶ್ರೀ ಗಜೇಂದ್ರಗಡ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ನಗರಸಭೆ ಅಧ್ಯಕ್ಷೆ ಲತಾ ಸಂಡೂರ ಮುಂತಾದ ಗಣ್ಯರು ಪಾಲ್ಗೊಳ್ಳುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ. ರಾಮಕೃಷ್ಣಯ್ಯ  ತಿಳಿಸಿದ್ದಾರೆ.

Advertisement

0 comments:

Post a Comment

 
Top