PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಮರಕುಂಬಿಯ ದಲಿತರ ಮೇಲಿನ ಹಲ್ಲೆ ಪ್ರಕರಣ ಮತ್ತು ಸವರ್ಣಿಯರನ್ನು ಬಂಧಿಸಿರುವ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರ ಜೊತೆ ಚರ್ಚೆ ಮಾಡಲಾಗಿದ್ದು ಇನ್ನೂ  ಒಂದು ವಾರದಲ್ಲಿ ಇದಕ್ಕೆ ಶಾಶ್ವತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಶಾಂತಿ ಸಭೆ ನಡೆಸಲಾಗುವುದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು . ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಯಾರಿಗೂ ಅನ್ಯಾಯವಾಗದಂತೆ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಲಾಗುವದು. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶಾಂತಿ ಕದಡುವ ಕೆಲಸ ಮಾಡುತ್ತಿದ್ದು ಅವರನ್ನು ಗುರುತಿಸಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 
        ಹೊಸಗುಡ್ಡ ದಲಿತ ಮಹಿಳೆಯ ಕೊಲೆ  ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
 ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಬೆಳೆಹಾನಿಗೆ ಪರಿಹಾರ ನೀಡಲಾಗುತ್ತಿದೆ. ಒಟ್ಟು 96 ಲಕ್ಷ ರೂ.ಗಳ ಬೆಳೆ ಹಾನಿ ಸಂಭವಿಸಿದೆ. ಮಳೆಯ ಕಾರಣಕ್ಕೆ ಬಿದ್ದ ಮನೆಗಳಿಗೆ ಪರಿಹಾರ ವಿತರಿಸಲಾಗುವುದು. ಅದೇ ರೀತಿ ಆಕಳು,ಎತ್ತು ಹಾಗೂ ಕುರಿಗಳನ್ನು ಕಳೆದುಕೊಂಡವರಿಗೂ ಪರಿಹಾರ ವಿತರಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. 
01 Sep 2014

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top