PLEASE LOGIN TO KANNADANET.COM FOR REGULAR NEWS-UPDATES


 ನಶಿಸಿ ಹೋಗುತ್ತಿರುವ ಜನಪದ ಸಾಹಿತ್ಯ, ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಯುವಜನತೆ ಮುಂದಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರು ಹೇಳಿದ್ದಾರೆ.
ಜಾನಪದ ವಿದ್ವಾಂಸ, ನಾಡೋಜ ಎಚ್. ಎಲ್. ನಾಗೇಗೌಡರ ಜನ್ಮ ಶತಮಾನೋತ್ಸವ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ತು ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಜನಪದ ಗೀತಗಾಯನ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶದಲ್ಲಿ ಹಾಸು ಹಕ್ಕಾಗಿದ್ದ, ಕುಟ್ಟುವ, ಬೀಸುವ, ಸೋಬಾನೆ ಪದ, ಜೋಗುಳಪದ, ಹಂತಿಪದ, ರಾಶಿಪದ ಮುಂತಾದ ಹಾಡುಗಳು ಇಂದು ಮರೆಯಾಘುತ್ತಿವೆ. ಹಾಡಿನೊಂದಿಗೆ ಜನಪದ ಸಂಸ್ಕೃತಿಯೂ ಮರೆಯಾಗುತ್ತಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು ವಿಷಾಧಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಚಾರ್ಯ ಸಿ.ವಿ. ಜಡಿಯವರ, ವಕೀಲರಾದ ಸತ್ಯನಾರಾಯಣ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಹಿರೇಬೀಡನಾಳ ಗ್ರಾಮದ ಸುರಕ್ಷಾ ಸಾಂಸ್ಕೃತಿಕ ಕಲಾ ತಂಡದ ಹಾಗೂ ದ್ವಿತೀಯ ಸ್ಥಾನ ಪಡೆದ ಕೊಪ್ಪಳ ಕಿತ್ತೂರ ರಾಣಿ ಚೆನ್ನಮ್ಮ ಕಲಾ ತಂಡಗಳಿಗೆ ನಗದು ಬಹುಮಾನ ವಿತರಿಸಲಾಯಿತು.
ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ ಸಮಾರಂಬದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಸವರಾಜ ಆಕಳವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟೆಯ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ವೈ. ಬಿ. ಜೂಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ವೀರ ಕನ್ನಡಿಗ ಗ್ರಾಮೀಣಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಿವಾನಂದ ಹೊದ್ಲೂರ ವಂದಿಸಿದರು.

Advertisement

0 comments:

Post a Comment

 
Top