ಕೊಪ್ಪಳ, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಭವನದಲ್ಲಿ ಏರ್ಪಡಿಸಲಾಗಿದ್ದ ಅಖಿಲ ಭಾರತ ಕನ್ನಡ ಪತ್ರಿಕಾ ಸಂಪಾದಕರ ದ್ವೀತಿಯ ಸಮಾವೇಶದಲ್ಲಿ ಲೋಕ ದರ್ಶನ ಕನ್ನಡ ದಿನಪತ್ರಿಕೆಯ ಜಿಲ್ಲಾ ವರದಿಗಾರ ಎಂ.ಸಾದಿಕ್‌ಅಲಿಯವರಿಗೆ ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಈ ಸಮಾವೇಶದ ಸಾನಿಧ್ಯವಹಿಸಿದ್ದ ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಡಿ.ಎಸ್.ಅಶ್ವಥ, ನಿವೃತ್ತ ಕೆಎಎಸ್ ಅಧಿಕಾರಿ ಕೆ.ಮಲ್ಲಿನಾಥ, ಹಿರಿಯ ಪತ್ರಕರ್ತ ಸತ್ಯನಾರಾಯಣ, ಕನ್ನಡ ಚಲನಚಿತ್ರ ನಟ ಬ್ಯಾಂಕ್ ಜನಾರ್ಧನ, ಸಹ ನಟ ಯತಿರಾಜ್ ಸೇರಿದಂತೆ ಕಾರ್ಯಕ್ರಮ ಸಂಘಟಕ ರಮೇಶ ಸುರ್ವೆ ಮತ್ತಿತರರು ಪಾಲ್ಗೊಂಡಿದ್ದರು.
0 comments:
Post a Comment
Click to see the code!
To insert emoticon you must added at least one space before the code.