ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಪ್ರಸಕ್ತ ಸಾಲಿನ ಬಿ.ಇಡಿ ಕೋರ್ಸಿನ ದಾಖಲಾತಿಗಾಗಿ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನರಹಿತ ಶಿಕ್ಷಕರ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಭರ್ತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅ.೧೮ ಕೊನೆಯ ದಿನವಾಗಿದ್ದು, ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ಸೂಚನೆಗಳನ್ನು ವೆಬ್‌ಸೈಟ್ ವಿಳಾಸ : www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್‌ನಲ್ಲಿ ಮಾಹಿತಿಗಳನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿಗಳನ್ನು ಕ್ರಮವಾಗಿ ಭರ್ತಿ ಮಾಡುವುದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರಿಕೃತ ದಾಖಲಾತಿ ಘಟಕ, ಬೆಂಗಳುರು ಇವರ ದೂರವಾಣಿ ಸಂಖ್ಯೆ : ೦೮೦-೨೨೪೮೩೧೪೦, ೨೨೪೮೩೧೪೫ ಇವರನ್ನು ಸಂಪರ್ಕಿಸಬಹುದು ಎಂದು ಮುನಿರಾಬಾದ್ ಡಯಟ್ ಪ್ರಾಚಾರ್ಯರು ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.